Skip to main content

Posts

ಅಕ್ಕನ ವಚನಗಳು - 191 ರಿಂದ 200 ರವರೆಗೆ

೧೯೧. ಆವ ವಿದ್ಯೆಯ ಕಲಿತಡೇನು ಶವ ವಿದ್ಯೆ ಮಾಣದನ್ನಕ? ಅಶನವ ತೊಡೆದಡೇನು? ವ್ಯಸನವ ಮರೆದೆಡೇನು? ಉಸಿರಗಿಡಿದರೇನು? ಬಸಿರ ಕಟ್ಟಿದರೇನು? ಚೆನ್ನಮಲ್ಲಿಕಾರ್ಜುನದೇವಯ್ಯ ನೆಲದಳವಾರನಾದಡೆ ಕಳ್ಳನೆಲ್ಲಿ ಅಡಗುವ? ೧೯೨. ಹಡೆವುದರಿದು ನರಜನ್ಮವ ಹಡೆವುದರಿದು ಗುರುಕಾರುಣ್ಯವ ಹಡೆವುದರಿದು ಲಿಂಗಜಂಗಮಸೇವೆಯ ಚೆನ್ನಮಲ್ಲಿಕಾರ್ಜುನಯ್ಯನ ಶರಣ ಸಂಗದಲ್ಲಿ ನಲಿದಾಡು ಕಂಡೆಯಾ ಎಲೆ ಮನವೇ ೧೯೩. ಮಾಟಕೂಟ ಬಸವಣ್ಣಂಗಾಯಿತ್ತು ನೋಟಕೂಟ ಪ್ರಭುದೇವರಿಗಾಯಿತ್ತು ಭಾವಕೂಟ ಅಜಗಣ್ಣಂಗಾಯಿತ್ತು ಸ್ನೇಹಕೂಟ ಬಾಚಿರಾಜಂಗಾಯಿತ್ತು ಇವರೆಲ್ಲರ ಕೂಟ ಬಸವಣ್ಣಂಗಾಯಿತ್ತು ಎನಗೆ ನಿಮ್ಮಲ್ಲಿ ಅವಿರಳದ ಕೂಟ ಚೆನ್ನಮಲ್ಲಿಕಾರ್ಜುನಯ್ಯ ೧೯೪. ಮಾಟಕೂಟದಲ್ಲಿ ಬಸವಣ್ಣನಿಲ್ಲ ನೋಟಕೂಟದಲ್ಲಿ ಪ್ರಭುದೇವರಿಲ್ಲ ಭಾವಕೂಟದಲ್ಲಿ ಅಜಗಣ್ಣನಿಲ್ಲ ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ ಇವರೆಲ್ಲರ ಕೂಟದಲ್ಲಿ ಬಸವಣ್ಣನಿಲ್ಲ ಎನಗಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ? ೧೯೫. ಕದಳಿಯೆಂಬುದು ತನು! ಕದಳಿಯೆಂಬುದು ಮನ! ಕದಳಿಯೆಂಬುದು ವಿಷಯಂಗಳು ಕದಳಿಯೆಂಬುದು ಭವಘೋರಾರಣ್ಯ ಕದಳಿಯೆಂಬುದ ಗೆದ್ದು ತವ ಬದುಕೆ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು ಭವಗೆಟ್ಟು ಬಂದ ಮಗಳೆಂದು ಕರುಣದಿಂ ತೆಗೆದು ಬಿಗಿಯಪ್ಪಿದರೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು ೧೯೬. ಕರ್...

ಅಕ್ಕನ ವಚನಗಳು - 181 ರಿಂದ 190 ರವರೆಗೆ

೧೮೧. ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ? ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ? ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ! ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ ಏನ ನುಡಿಸುವಿರಯ್ಯ? ೧೮೨. ಕೆಂಡವ ಶವದಂತೆ ಸೂತ್ರ ತಪ್ಪಿದ ಬೊಂಬೆಯಂತೆ ಜಲವರತ ತಟಾಕದಂತೆ ಬೆಂದ ನುಲಿಯಂತೆ- ಮತ್ತೆ ಹಿಂದಣಂಗ ಉಂಟೇ ಅಣ್ಣ ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?! ೧೮೩. ಫಲ ಒಳಗೆ ಪಕ್ವವಾಗಿಯಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು ಆ ಭಾವದಿಂದ ಮುಚ್ಚಿದೆ ಇದಕೆ ನೋವೇಕೆ? ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ ೧೮೪. ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ ಗಂಡು-ಹೆಣ್ಣೆಂಬ ಜಾತಿ ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು ದೇವರ ಮುಂದೆ ನಾಚಲುಂಟೆ? ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮೆರೆಸಬಹುದೆ ಹೇಳಯ್ಯ ೧೮೫. ಎಲ್ಲಿ ಹೋದರೂ ಕಲಿಗೆ ಭಯವಿಲ್ಲ ಹಂದೆಗೆ ಸುಖವಿಲ್ಲ ಕೇಳಿರಣ್ಣ! ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ ...

ಅಕ್ಕನ ವಚನಗಳು - 171 ರಿಂದ 180 ರವರೆಗೆ

೧೭೧. ಮರ ಮರ ಮಥನಿಸಿ ಕಿಚ್ಚು ಹುಟ್ಟಿ ಸುತ್ತಣ ತರುಮರಾದಿಗಳ ಸುಡಲಾಯಿತ್ತು ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು ಇಂತಪ್ಪ ಮಹಾನುಭಾವರ ಅನುಭಾವವ ತೋರಿ ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ ೧೭೨. ಸಂಗದಿಂದಲ್ಲದೇ ಅಗ್ನಿ ಹುಟ್ಟದು ಸಂಗದಿಂದಲ್ಲದೇ ಬೀಜ ಮೊಳೆದೋರದು ಸಂಗದಿಂದಲ್ಲದೇ ದೇಹವಾಗದು ಸಂಗದಿಂದಲ್ಲದೇ ಸರ್ವಸುಖದೋರದು ಚೆನ್ನಮಲ್ಲಿಕಾರ್ಜುನದೇವಯ್ಯ, ನಿಮ್ಮ ಶರಣರ ಅನುಭವದ ಸಂಗದಿಂದಾನು ಪರಮಸುಖಿಯಯ್ಯಾ ೧೭೩. ಶಿವಭಕ್ತನ ಮನೆಯಂಗಳ ವಾರಣಾಸಿ ಎಂಬುದು ಹುಸಿಯೆ? ಶಿವಭಕ್ತನ ಮನೆಯಂಗಳದಲ್ಲಿ ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ಶ್ರೀ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ, ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ! ೧೭೪. ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು? ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ ೧೭೫. ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ ಜೀವದ ಭಂಗವ ಶಿವಾನುಭವದಿಂದ ಗೆಲಿದೆ ...

ಅಕ್ಕನ ವಚನಗಳು - 161 ರಿಂದ 170 ರವರೆಗೆ

೧೬೧. ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ ಚೆನ್ನಮಲ್ಲಿಕಾರ್ಜುನ ೧೬೨. ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ [ಕೂರುಮ ದಿಗುದಂತಿ] ದಿಗುವಳಯವ ನುಂಗಿ ನಿಜ ಶೂನ್ಯ ತಾನಾದ ಬಳಿಕ ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ? ಕಂಗಳ ನೋಟದಲ್ಲಿ ಮನ ಸೊಗಸಿನಲ್ಲಿ ಅನಂಗನ ಧಾಳಿಯನಗಲಿದೆವಣ್ಣ ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ? ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ ಪರಪುರುಷರು ನಮಗಾಗದಣ್ಣ! ೧೬೩. ನಮಗೆ ನಮ್ಮ ಲಿಂಗದ ಚಿಂತೆ ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣ? ೧೬೪. ನಿಮ್ಮ ನಿಲುವಿಂಗೆ ನೀವು ನಾಚಬೇಡವೆ? ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ? ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನ ೧೬೫. ಶಿವಭಕ್ತರ ರೋಮ ನೊಂದರೆ ಒಡನೆ ಶಿವನು ನೋವ ನೋಡಾ ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ ! ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತ...

ಅಕ್ಕನ ವಚನಗಳು - 151 ರಿಂದ 160 ರವರೆಗೆ

೧೫೧. ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು [ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು [ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು ಎನಗೀ ಕ್ರಮವನರುಹಿದನಯ್ಯ ೧೫೨. ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು ಕೆಟ್ಟ ಕೇಡ ನೋಡಯ್ಯ ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ ಇಂತೀ ಪರಶಿವಮೂರ್ತಿ ಹರನೇ ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ ೧೫೩. ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು ಇಳಿತಂದನಯ್ಯ ಶಿವನು ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ ಚಿತ್ತದ ಪ್ರವೃತ್ತಿಯ ಹಿಂಗಿಸಿ ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ ಭಾವವೆಲ್ಲ ಮಹಾಘನದ ಬೆಳಗು ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ ೧೫೪. ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು...

ಅಕ್ಕನ ವಚನಗಳು - 141 ರಿಂದ 150 ರವರೆಗೆ

೧೪೧. ಐದು ಪರಿಯ ಬಣ್ಣವ ತಂದುಕೊಟ್ಟರೆ ನಾಲ್ಕು ಮೊಲೆಯ ಹಸುವಾಯಿತ್ತು ಹಸುವಿನ ಬಸರಲ್ಲಿ ಕರು ಹುಟ್ಟಿತ್ತು ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ ಕರ ರುಚಿಯಾಗಿತ್ತು ಮಧುರ ತಲೆಗೇರಿ, ಅರ್ಥ ನೀಗಾಡಿ ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು ಚೆನ್ನಮಲ್ಲಿಕಾರ್ಜುನ ೧೪೨. ರವಿಯ ಕಾಳಗವ ಗೆಲಿದು ಒಂಬತ್ತು ಬಾಗಿಲ ಮುರಿದು ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ ಆರರತಾತನೇ ಗುರು ಗುರು ತಾನೇ ಬೇರಿಲ್ಲ ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಸಂಗನ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ೧೪೩. ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ! ತನ್ನವರೆಂದರೆ ಮನ್ನಿಸುವನೇ ಶಿವನು? ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು ಮತ್ತೆ ಕೆಲವರ ಬಲ್ಲನೇ? ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ! ೧೪೪. ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರೆಂತೆಂಬೆ?! ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ, ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು ಐಮುಗನರಮನೆ ಸುಖವಿಲ್ಲೆಂದರಿದವನಾಗಿ ಇನ್ನು ಕೈಲಾಸವನು ಹೊಗೆ ಹೊಗೆ! ಮರ್ತ್ಯಕ್ಕೆ ಅಡಿಯಿಡೆನು ಚೆನ್ನಮಲ್ಲಿಕಾರ್ಜುನದೇವ ನೀನೆ ಸಾ...

ಅಕ್ಕನ ವಚನಗಳು - 131 ರಿಂದ 140 ರವರೆಗೆ

೧೩೧. ದೃಶ್ಯವಾದ ರವಿಯ ಬೆಳಗು, ಆಕಾಶದ ವಿಸ್ತೀರ್ಣ, ವಾಯುವಿನ ಚಲನೆ, ತರುಗುಲ್ಮಲತಾದಿಗಳಲ್ಲಿಯ ತಳಿರು ಪುಷ್ಪ ಷಡುವರ್ಣಂಗಳೆಲ್ಲ ಹಗಲಿನ [ಪೂಜೆ] ಚಂದ್ರಪ್ರಕಾಶ, ನಕ್ಷತ್ರ, ಅಗ್ನಿ, ವಿದ್ಯುದ್ ಆದಿಗಳು ದೀಪ್ತಿಮಯವೆನಿಸಿಪ್ಪುವುಗಳೆಲ್ಲ ಇರುಳಿನ ಪೂಜೆ; ಹಗಲಿರುಳು ನಿನ್ನ ಪೂಜೆಯಲ್ಲಿ ಎನ್ನ ಮರೆದಿಪ್ಪೆನಯ್ಯ ಚೆನ್ನಮಲ್ಲಿಕಾರ್ಜುನ ೧೩೨. ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವನ ರಾವುತನ ಮಾಡಿ, ಮೇಲಕ್ಕುಪ್ಪುವಡಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ, ಈ ವಾರುವನ ದಳದ ಮೇಲೆ ಅಟ್ಟಿ ಮುಟ್ಟಿ ಹಾರಿ ಬರಸೆಳೆದು ನಿಲಿಸಲರಿಯದೆ ಪವನಬಣ್ಣದ ಕೇಸರಿಯ ತೊತ್ತಳದುಳಿವುತ್ತಿಪ್ಪುದಿದಾರಯ್ಯ? ಅಂಗಡಿಯ ರಾಜಬೀದಿಯೋಳಗೆ ರತ್ನಶೆಟ್ಟಿಯ ಮಾಣಿಕ್ಯ ಬಿದ್ದರೆ ಥಳಥಳನೆ ಹೊಳೆವ ಪ್ರಜ್ವಳಿತವ ಕಾಣದೆ ಹಳಹಳನೆ ಹಳಚುತ್ತಿಪ್ಪುದಿದಾರಯ್ಯ? ಹೃದಯಸ್ಥಾನದ ಧೂಪಗುಂಡಿಗೆಯಲ್ಲಿ ಆಧಾರಸ್ಥಾನದಿಂಗಳ ಮತ್ತೊಂದು ಬಂದು, ಪರಿಣಾಮವೆಂಬ ಧೂಪವನಿಕ್ಕಿ ವಾಯುವಿನ ಸಂಬಂಧವರಿಯದೆ ವಾಯುವ ಮೇಲಕ್ಕೆತ್ತಲು ಗಗನಕ್ಕೆ ತಾಗುವುದು, ತಾಗಲಿಕೆ ಅಲ್ಲಿರ್ದ ಅಮೃತದ ಕೊಡನೊಡೆದು ಕೆಳಗಣ ಹೃದಯಸ್ಥಾನದ ಮೇಲೆ ಬೀಳೆ, ಮರೆಸಿದ ಮಾಣಿಕ್ಯವ ಕಾಣಬಹುದು, ಇದನಾರು ಬಲ್ಲರೆಂದರೆ ಹಮ್ಮಳಿದು ಇಹಪರವನರಿದು ಪಂಚೇಂದ್ರಿಯದ ಇಂಗಿತವನರಿದ ಶರಣ ಬಸವಣ್ಣನಲ್ಲದೆ ಈ ಪ್ರಾಣಘಾತವ ಮಾಡುವರೆತ್ತ ಬಲ್ಲರಯ್ಯ, ಚೆನ್ನಮಲ್ಲಿಕಾರ್ಜುನ ೧೩೩. ಲಿಂಗಕ್ಕೆ ಶರಣೆಂದು ಪೂಜಿ...