Skip to main content

Posts

ಬಸವಣ್ಣನ ವಚನಗಳು - 241 ರಿಂದ 250 ರವರೆಗೆ

೨೪೧. ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ ? ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ ? ಜಂಗಮವಿಲ್ಲದೆ ಮಾಡಬಹುದೆ, ರೂಢೀಶನ ಭೇದಿಸಬಹುದೆ ? ಒಡಲಿಲ್ಲದ ನಿರಾಳಕರ್ತೃ ಕೂಡಲಸಂಗಮದೇವ ಜಂಗಮಮುಖಲಿಂಗವಾದನಾಗಿ ಮತ್ತೊಂದನರಿಯೆನಯ್ಯ. ೨೪೨. ಕೆಂಡದಲ್ಲಿಟ್ಟರೆ ಕೈ ಬೆಂದುದೆಂಬರು; ಕೊಂಡಿಟ್ಟವನ ಕೈ ಮುನ್ನವೇ ಬೆಂದುದು! ನೊಂದೆ ನಾನು ನೊಂದೆನಯ್ಯ. ಬೆಂದೆ ನಾನು ಬೆಂದೆನಯ್ಯ. ಕೂಡಲಸಂಗನ ಶರಣರ ಕಂಡು ಕಾಣದಂತಿದ್ದರೆ ಅಂದೇ ಬೆಂದೆನಯ್ಯ. ೨೪೩. ಲಾಂಛನವ ಕಂಡು ನಂಬುವೆ, ಅವರಂತರಂಗವ ನೀವೇ ಬಲ್ಲಿರಿ. ತೊತ್ತಿಂಗೆ ತೊತ್ತುಗೆಲಸವಲ್ಲದೆ ಅರಸರ ಸುದ್ದಿ ಎಮಗೇಕಯ್ಯ ? ರತ್ನಮೌಕ್ತಿಕದಚ್ಚು ಕೂಡಲಸಂಗಮದೇವ, ನಿಮ್ಮ ಶರಣರು. ೨೪೪. ಎಡದ ಕೈಯಲ್ಲಿ ನಿಗಳವನಿಕ್ಕಿ, ಬಲದ ಕೈಯ್ಯ ಕಡಿದುಕೊಂಡರೆ, ನೋಯದಿಪ್ಪುದೇ, ಅಯ್ಯ ? ಪ್ರಾಣ ಒಂದಾಗಿ ದೇಹ ಬೇರಿಲ್ಲ. ಲಿಂಗವ ಪೂಜಿಸಿ ಜಂಗಮವನುದಾಸೀನ ಮಾಡಿದರೆ ಬೆಂದೆನಯ್ಯ ನಾನು, ಕೂಡಲಸಂಗಮದೇವ. ೨೪೫. ತನುವ ನೋಯಿಸಿ, ಮನವ ಬಳಲಿಸಿ ನಿಮ್ಮ ಪಾದವಿಡಿದವರೊಳರೆ ? ಈ ನುಡಿ ಸುಡದಿಹುದೆ ? ಕೂಡಲಸಂಗಮದೇವ, ಶಿವಭಕ್ತರ ನೋವೇ ಅದು ಲಿಂಗದ ನೋವು! ೨೪೬. ಕುದುರೆ ಸತ್ತಿಗೆಯವರ ಕಂಡರೆ ಹೊರಳಿಬಿದ್ದು ಕಾಲ ಹಿಡಿವರಯ್ಯ. ಬಡಭಕ್ತರು ಬಂದರೆ, ಎಡೆಯಿಲ್ಲ ಅತ್ತ ಸನ್ನಿ ಎಂಬರು. ಎನ್ನೊಡೆಯ ಕೂಡಲಸಂಗಯ್ಯನವರ ತಡೆಗೆಡಹಿ ಮೂಗ ಕೊಯ್ಯದೆ ಮಾಬನೆ ? ೨೪೭. ಅಡ್ಡದೊಡ್ಡ ನಾನಲ್ಲಯ್ಯ. ದೊಡ್ಡ ಬಸಿರು ಎನಗಿಲ್ಲವಯ್ಯ. ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯ. ಹ...

ಬಸವಣ್ಣನ ವಚನಗಳು - 231 ರಿಂದ 240 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೩೧. ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ! ಆನಂದದಿಂದ ನಲಿನಲಿದಾಡುವೆನು. ಆನಂದದಿಂದ ಕುಣಿಕುಣಿದಾಡುವೆನು. ಕೂಡಲಸಂಗನ ಶರಣರು ಬಂದರೆ ಉಬ್ಬಿಕೊಬ್ಬಿ ಹರುಷದಲೋಲಾಡುವೆನು. ೨೩೨. ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾಯಿತ್ತೆನ್ನ ಭಕ್ತಿ! ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾಯಿತ್ತೆನ್ನ ಭಕ್ತಿ! ಕೂಡಲಸಂಗಮದೇವ, ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ? ೨೩೩. ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ! ಅಂಜುವೆನಂಜುವೆನಯ್ಯ! ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು! ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ, ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ! ೨೩೪. ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ; ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು. ನಾನೇನು ಪಾಪವ ಮಾಡಿದೆನೋ! ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ? ಇರಿಯದ ವೀರ ಇಲ್ಲದ ಸೊಬಗುವ ಎಲ್ಲ ಒಡೆಯರು ಏರಿಸಿ ನುಡಿವರು! ಎನಗಿದು ವಿಧಿಯೇ ಕೂಡಲಸಂಗಮದೇವ ? ೨೩೫. ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ ಹೊಗಳ...

ಬಸವಣ್ಣನ ವಚನಗಳು - 221 ರಿಂದ 230 ರವರೆಗೆ

೨೨೧. ಮೇಲಾಗಲೊಲ್ಲೆ ಕೀಳಾಗಲೊಲ್ಲದೆ! ಕೀಳಿಂಗಲ್ಲದೆ ಹಯನು ಕರೆವುದೆ ? ಮೇಲಾಗಿ ನರಕದಲೋಲಾಡಲಾರೆನು! ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು ಮಹಾದಾನಿ ಕೂಡಲಸಂಗಮದೇವ. ೨೨೨. ಕಾಗೆ ವಿಷ್ಟಿಸುವ ಹೊನ್ನಕಳಶವಹುದರಿಂದ, ಒಡೆಯರು ಜೋಗೈಸುವ ಚಮ್ಮಾವುಗೆಯ ಮಾಡಯ್ಯ. ಅಯ್ಯ, ನಿಮ್ಮ ಶರಣರ ಪಾದಕ್ಕೆ ಚಮ್ಮಾವುಗೆಯ ಮಾಡಯ್ಯ. "ಕರ್ಮಾವಲಂಬಿನಃ ಕೇಚಿತ್ ಕೇಚಿತ್ ಜ್ಞಾನಾವಲಂಬಿನಃ ವಯಂತು ಶಿವಭಕ್ತಾನಾಂ ಪಾದರಕ್ಷಾವಲಂಬಿನಃ" ಕೂಡಲಸಂಗಮದೇವ ನಿಮ್ಮ ಸೆರಗೊಡ್ಡಿ ಬೇಡುವೆನು ಇದೊಂದೇ ವರವ ಕರುಣಿಸಯ್ಯ. ೨೨೩. ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ, ಅಂಬುಜಕ್ಕೆ ಭಾನುವಿನ ಉದಯದ ಚಿಂತೆ. ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ. ಎನಗೆ ನಮ್ಮ ಕೂಡಲಸಂಗಮದೇವರ ನೆನೆವುದೇ ಚಿಂತೆ! ೨೨೪. ಹೊಲಬುಗೆಟ್ಟ ಶಿಶು ತನ್ನ ತಾಯನರಸುವಂತೆ, ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ, ಬಯಸುತ್ತಿದ್ದೆನಯ್ಯ ನಿಮ್ಮ ಭಕ್ತರ ಬರವನು! ಬಯಸುತ್ತಿದ್ದೆನಯ್ಯ ನಿಮ್ಮ ಶರಣರ ಬರವನು! ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ ಎನಗೆ ನಿಮ್ಮ ಶರಣರ ಬರವು ಕೂಡಲಸಂಗಮದೇವ. ೨೨೫. ಸೂರ್ಯನುದಯ ತಾವರೆಗೆ ಜೀವಾಳ! ಚಂದ್ರಮನುದಯ ನೈದಿಲೆಗೆ ಜೀವಾಳ! ಕೂಪರ ಠಾವಿನಲ್ಲಿ ಕೂಟ-ಜೀವಾಳವಯ್ಯ. ಒಲಿದ ಠಾವಿನಲ್ಲಿ ನೋಟ-ಜೀವಾಳವಯ್ಯ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ-ಜೀವಾಳವಯ್ಯ. ೨೨೬. ಕಂಡರೆ ಮನೋಹರವಯ್ಯ, ಕಾಣದಿದ್ದರೆ ಅವಸ್ಥೆ ನೋಡಯ್ಯ. ಹಗಲು ಇರುಳಹುದು; ಇರುಳು ಹಗಲಹುದು. ಇರುಳು ಹಗಲೊಂದು ಜುಗ ಮೇಲೆ ಕೆಡೆದಂ...

ಬಸವಣ್ಣನ ವಚನಗಳು - 211 ರಿಂದ 220 ರವರೆಗೆ

೨೧೧. ಮಾವಿನ ಕಾಯೊಳಗೊಂದು ಎಕ್ಕೆಯ ಕಾಯಿ ನಾನಯ್ಯ! ನಾನು ಭಕ್ತನೆಂತೆಂಬೆ ನಿಮ್ಮ ಶರಣರ ಮುಂದೆ ನಾಚಿಕೆಯಿಲ್ಲದೆ ? ಕೂಡಲಸಂಗನ ಶರಣರ ಮುಂದೆ ನಾನೆಂತು ಭಕ್ತನಪ್ಪೆನಯ್ಯ ?! ೨೧೨. ಮರದ ನೆಳಲಲ್ಲಿದ್ದು ತನ್ನ ನೆಳಲನರಸುವರೆ ? ನಿಮ್ಮ ಶರಣರ ಮುಂದೆ ನಾನೇತರ ಭಕ್ತನಯ್ಯ! ನಿಮ್ಮ ಶರಣರ ಮುಂದೆ ನಾನೇತರ ಯುಕ್ತನಯ್ಯ! ನಾನು ಭಕ್ತನೆಂಬ ನುಡಿ ಸುಡದೆ ಕೂಡಲಸಂಗಮದೇವ. ೨೧೩. ಎನಗಿಂತ ಕಿರಿಯರಿಲ್ಲ! ಶಿವಭಕ್ತರಿಗಿಂತ ಹಿರಿಯರಿಲ್ಲ. ನಿಮ್ಮ ಪಾದ ಸಾಕ್ಷಿ ಎನ್ನ ಮನ ಸಾಕ್ಷಿ! ಕೂಡಲಸಂಗಮದೇವಾ ಎನಗಿದೇ ದಿಬ್ಯ. ೨೧೪. ಅರ್ಚಿಸಲರಿಯೆ, ಪೂಜಿಸಲರಿಯೆ, ನಿಚ್ಚ ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ! ಕಪ್ಪಡಿವೇಷದಿಂದಾನು ಬಂದಾಡುವೆ. ಕಪ್ಪಡಿವೇಷದಿಂದ, ಈಶ, ನಿಮ್ಮ ದಾಸರ ದಾಸಿಯ ದಾಸ ನಾನಯ್ಯ. ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯ. ಕೂಡಲಸಂಗಮದೇವ, ನಿಮ್ಮ ಲಾಂಛನವ ಧರಿಸಿಪ್ಪ ಉದರಪೋಷಕ ನಾನಯ್ಯ. ೨೧೫. ಅಪ್ಪನು ಡೋಹರ ಕಕ್ಕಯ್ಯನಾಗಿ, ಮುತ್ತಯ್ಯ ಚೆನ್ನಯ್ಯನಾದರೆ ಆನು ಬದುಕೆನೆ ? ಮತ್ತಾ ಶ್ವಪಚಯ್ಯನ ಸನ್ನಿಧಿಯಿಂದ ಭಕ್ತಿಯ ಸದ್ಗುಣವ ನಾನರಿಯೆನೆ ? ಕಷ್ಟಜಾತಿಜನ್ಮದಲ್ಲಿ ಜನಿಯಿಸಿದೆ ಎನ್ನ, ಎನಗಿದು ವಿಧಿಯೇ ಕೂಡಲಸಂಗಮದೇವ ? ೨೧೬. ಉತ್ತಮ ಕುಲದಲ್ಲಿ ಹುಟ್ಟಿದೆನೆಂಬ ಕಷ್ಟತನದ ಹೊರೆಯ ಹೊರಿಸಿದಿರಯ್ಯ! ಕಕ್ಕಯನೊಕ್ಕುದನಿಕ್ಕ ನೋಡಯ್ಯ, ದಾಸಯ್ಯ ಶಿವದಾನವನೆರೆಯ ನೋಡಯ್ಯ. ಮನ್ನಣೆಯ ಚೆನ್ನಯ್ಯನೆನ್ನುವ ಮನ್ನಿಸ. ಉನ್ನತಮಹಿಮ ಕೂಡಲಸಂಗಮದೇವಾ ಶಿವಧೋ! ಶಿವಧೋ!! ೨೧೭. ಸೆಟ್...

ಬಸವಣ್ಣನ ವಚನಗಳು - 201 ರಿಂದ 210 ರವರೆಗೆ

೨೦೧. ಊರ ಸೀರೆಗೆ ಅಸಗ ಬಡಿವಡೆದಂತೆ ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು, ಎಂದು ಮರುಳಾದೆ. ನಿಮ್ಮನರಿಯದ ಕಾರಣ, ಕೆಮ್ಮನೆ ಕೆಟ್ಟೆ ಕೂಡಲಸಂಗಮದೇವ. ೨೦೨. ಕಾಂಚನವೆಂಬ ನಾಯ ನೆಚ್ಚಿ ನಿಮ್ಮ ನಾನು ಮರೆದೆನಯ್ಯ. ಕಾಂಚನಕ್ಕೆ ವೇಳೆಯಲ್ಲದೆ, ಲಿಂಗಕ್ಕೆ ವೇಳೆಯಿಲ್ಲ! ಹಡಕಿಗೆ ಮೆಚ್ಚಿದ ಸೊಣಗನಮೃತದ ರುಚಿಯ ಬಲ್ಲುದೇ ? ಕೂಡಲಸಂಗಮದೇವ. ೨೦೩. ಹಗೆಹದಲ್ಲಿ ಬಿದ್ದವರ ಮೇಲೆ ಒರಳ ನೂಂಕುವರೆ ? ಕೋಳದ ಮೇಲೆ ಸಂಕಲೆಯನಿಕ್ಕುವರೆ ? ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ? ಕೂಡಲಸಂಗಯ್ಯ ಕಾಡುವ ಕಾಟ ಸಿರಿಯಾಳಂಗಲ್ಲದೆ ಸೈರಿಸಬಹುದೆ ? ೨೦೪. ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ, ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು. ಅರ್ಥಪ್ರಾಣಾಭಿಮಾನವಾರಿಗೆಯು ಸಮನಿಸದು, ಲಿಂಗಮುಖದಲುದಯವಾದ ಶರಣಂಗಲ್ಲದೆ, ಅಯ್ಯ, ಕೂಡಲಸಂಗನ ಶರಣರ ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು, ಹೇಳೆನ್ನ ತಂದೆ. ೨೦೫. ಬಾಣಮಯೂರರಂತೆ ಬಣ್ಣಿಸಲರಿಯೆ ಸಿರಿಯಾಳನಂತೆ ಉಣಲಿಕ್ಕಲರಿಯೆ ದಾಸಿಮಯ್ಯನಂತೆ ಉಡಕೊಡಲರಿಯೆ ಉಂಡುಟ್ಟು ಕೊಟ್ಟರೆ ಮುಯ್ಯಿಗೆ ಮುಯ್ಯೆನಿಸಿತ್ತು, ಎನಗೆ ಕೊಟ್ಟರೆ ಧರ್ಮ ಕೂಡಲಸಂಗಮದೇವ. ೨೦೬. ಎನ್ನ ತಪ್ಪನಂತಕೋಟಿ ನಿಮ್ಮ ಸೈರಣೆಗೆ ಲೆಕ್ಕವಿಲ್ಲಯ್ಯ. ಇನ್ನು ತಪ್ಪಿದೆನಾದರೆ ನಿಮ್ಮ ಪಾದವೇ ದಿವ್ಯ ಕೂಡಲಸಂಗಮದೇವಯ್ಯ, ನಿಮ್ಮ ಪ್ರಮಥರ ಮುಂದೆ ಕಿನ್ನರಿ ಬೊಮ್ಮಣ್ಣನೇ ಸಾಕ್ಷಿ! ೨೦೭. ಅಡಿಗಡಿಗೆ ಎನ್ನ ಮನವ ಜಡಿದು ನೋಡ...

ಸರ್ವಜ್ಞನ ವಚನಗಳು - 191 ರಿಂದ 200

೧೯೧. ಹಿರಿದು ಪಾಪವ ಮಾಡಿ - ಹರಿವರು ಗಂಗೆಗೆ ಹರಿವ ನೀರಲ್ಲಿ ಕರಗುವೊಡೆ - ಯಾ ಪಾಪ ಎರೆಯ ಮಣ್ಣಲ್ಲ ಸರ್ವಜ್ಞ ೧೯೨. ಅಂತಿರ್ದರಿಂತಿರ್ದ | ರೆಂತಿರ್ದರೆನಬೇಡ ಕುಂತಿಯಣುಗರು ತಿರಿದರು - ಮಿಕ್ಕವರು ಎಂತಿರ್ದರೇನು ಸರ್ವಜ್ಞ ೧೯೩. ಉಳ್ಳಲ್ಲಿ ಉಣಲೊಲ್ಲ | ಉಳ್ಳಲ್ಲಿ ಉಡಲೊಲ್ಲ ಉಳ್ಳಲ್ಲಿ ದಾನಗೊಡಲೊಲ್ಲ - ನವನೊಡವೆ ಕಳ್ಳಗೆ ನೃಪಗೆ ಸರ್ವಜ್ಞ ೧೯೪. ಕೊಡುವಾತನೇ ಮೃಢನು | ಪಡೆವಾತನೇ ನರನು ಒಡಲು-ಒಡವೆಗಳು ಕೆಡೆದು ಹೋಗದ ಮುನ್ನ ಕೊಡು ಪಾತ್ರವನರಿದು ಸರ್ವಜ್ಞ ೧೯೫. ಅನ್ನವನಿಕ್ಕುವುದು | ನನ್ನಿಯನು ನುಡಿವುದು ತನ್ನಂತೆ ಪರರ ಬಗೆದೊಡೆ - ಕೈಲಾಸ ಬಿನ್ನಾಣವಕ್ಕು ಸರ್ವಜ್ಞ ೧೯೬. ಆನೆ ಮುಕುರದೊಳಡಗಿ | ಭಾನು ಸರಸಿಯೊಳಡಗಿ ನಾನೆನ್ನ ಗುರುವಿನೊಳಡಗಿ - ಸಂಸಾರ ತಾನದೆತ್ತಣದು ಸರ್ವಜ್ಞ ೧೯೭. ಎಂಜಲು ಹೊಲೆಯಿಲ್ಲ | ಸಂಜೆಗತ್ತಲೆಯಿಲ್ಲ ಅಂಜಿಕೆಯಿಲ್ಲ ಭಯವಿಲ್ಲ - ಜ್ಞಾನವೆಂ ಬಂಜನವಿರಲು ಸರ್ವಜ್ಞ ೧೯೮. ಬಲ್ಲೆನೆಂಬಾ ಮಾತು | ಎಲ್ಲವೂ ಹುಸಿ ನೋಡಾ ಬಲ್ಲರೆ ಬಲ್ಲೆನೆನಬೇಡ - ಸುಮ್ಮನಿರ ಬಲ್ಲರೆ ಬಲ್ಲ ಸರ್ವಜ್ಞ ೧೯೯. ಏನಾದಡೇನಯ್ಯ | ತಾನಾಗದನ್ನಕ್ಕ ತಾನಾಗಿ ತನ್ನನರಿದಡೆ - ಲೋಕ ತಾ ನೇನಾದಡೇನು ಸರ್ವಜ್ಞ ೨೦೦. ಆನೆ ನೀರಾಟದಲಿ | ಮೀನ ಕಂಡಂಜುವುದೇ ಹೀನಮಾನವರ ಬಿರುನುಡಿಗೆ - ತತ್ವದ ಜ್ಞಾನಿ ಅಂಜುವನೆ ಸರ್ವಜ್ಞ

ಸರ್ವಜ್ಞನ ವಚನಗಳು - 181 ರಿಂದ 190

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೧೮೧. ಕೊಟ್ಟು ಹುಟ್ಟಲಿಲ್ಲ | ಮುಟ್ಟಿ ಪೂಜಿಸಲಿಲ್ಲ ಸಿಟ್ಟಿನಲಿ ಶಿವನ ಬೈದರೆ - ಶಿವ ತಾನು ರೊಟ್ಟಿ ಕೊಡುವನೆ ಸರ್ವಜ್ಞ ೧೮೨. ಹಸಿವರಿತು ಉಂಬುದು | ಬಿಸಿನೀರ ಕುಡಿವುದು ಹಸಿವಕ್ಕು ವಿಷಯ ಘನವಕ್ಕು - ವೈದ್ಯಗೆ ಬೆಸಸ ಬೇಡೆಂದ ಸರ್ವಜ್ಞ ೧೮೩. ಲಿಂಗಕೆ ತೋರಿಸುತ | ನುಂಗುವಾತನೆ ಕೇಳು ಲಿಂಗ ಉಂಬುವುದೆ ? ಪೊಡಮಡು - ತೆಲೊ ಪಾಪಿ ಜಂಗಮಕೆ ನೀಡು ಸರ್ವಜ್ಞ ೧೮೪. ಹೆಂಡಿರು ಮಕ್ಕಳಿಗೆಂದು | ದಂಡಿಸದಿರು ದೇಹವನು ಭಂಡ ವಸ್ತುವನು ಕೊಡದುಣದೆ - ಬೈಚಿಡಲು ಕಂಡವರಿಗಹುದು ಸರ್ವಜ್ಞ ೧೮೫. ಮಾತು ಬಂದಲ್ಲಿ ತಾ | ಸೋತು ಬರುವುದು ಲೇಸು ಮಾತಿಂಗೆ ಮಾತು ಮಥಿಸೆ - ವಿಧಿ ಬಂದು ಆತುಕೊಂಡಿಹುದು ಸರ್ವಜ್ಞ ೧೮೬. ಕಣ್ಣು ನಾಲಗೆ ಮನವು | ತನ್ನವೆಂದೆನ ಬೇಡ ಅನ್ಯರು ಕೊಂದರೆನ ಬೇಡ - ಇವು ಮೂರು ತನ್ನನೇ ಕೊಲುಗು ಸರ್ವಜ್ಞ ೧೮೭. ನುಡಿಸುವುದಸತ್ಯವನು | ಕೆಡಿಸುವುದು ಧರ್ಮವನು ಒಡಲನೆ ಕಟ್ಟಿ ಹಿಡಿಸುವುದು - ಲೋಭದ ಗಡಣ ಕಾಣಯ್ಯ ಸರ್ವಜ್ಞ ೧೮೮. ಸೊಡರಿಂಗೆ ಎಣ್ಣೆಯ | ಕೊಡನೆತ್ತಿ ...