Skip to main content

Posts

ಬಸವಣ್ಣನ ವಚನಗಳು - 281 ರಿಂದ 290 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೮೧. ಎನ್ನ ಜನ್ಮವ ತೊಡೆದ ನೀ ಧರ್ಮಿ! ಎನ್ನ ಜನ್ಮವನತಿಗಳೆದ ನೀ ಧರ್ಮಿ! ಎನ್ನ ಭವಬಂಧನವ ನೀಕರಿಸಿದೆಯಾಗಿ ಶಿವನೇ ಗತಿಯೆಂದು ನಂಬಿದೆನಯ್ಯ. ಎನ್ನಷ್ಟಮದಂಗಳ ಸುಟ್ಟುರುಹಿದೆಯಾಗಿ ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ. ಸೃಷ್ಟಿಪ್ರತಿಪಾಲಕ ನಿಮ್ಮ ನಾ ನಂಬಿದೆ ಕರುಣಿಸು ಕೂಡಲಸಂಗಮದೇವ. ೨೮೨. ಭವರೋಗವೈದ್ಯನೆಂದು ನಾ ನಿಮ್ಮ ಮರೆವೊಕ್ಕೆ, ಭಕ್ತಿದಾಯಕ ನೀನು, ಕರುಣಿಸು ಲಿಂಗತಂದೆ. ಜಯ ಜಯ ಶ್ರೀ ಮಹಾದೇವ, ಜಯ ಜಯ ಶ್ರೀ ಮಹಾದೇವ, ಎನುತಿದ್ದಿತೆನ್ನ ಮನವು; ಕೂಡಲಸಂಗಮದೇವಂಗೆ ಶರಣೆನುತಿದ್ದಿತೆನ್ನ ಮನವು. ೨೮೩. ಅಂಗೈಯೊಳಗಣ ಲಿಂಗವ ನೋಡುತ್ತ ಕಂಗಳು ಕಡೆಗೋಡಿವರಿವುತ್ತ ಸುರಿವುತ್ತ ಎಂದಿಪ್ಪೆನೋ ?! ನೋಟವೇ ಪ್ರಾಣವಾಗಿ ಎಂದಿಪ್ಪೆನೋ! ಕೂಟವೇ ಪ್ರಾಣವಾಗಿ ಎಂದಿಪ್ಪೆನೋ! ಎನ್ನಂಗ ವಿಕಾರದ ಸಂಗವಳಿದು ಕೂಡಲಸಂಗಯ್ಯ ಲಿಂಗಯ್ಯ ಲಿಂಗವೆನುತ್ತ ಎಂದಿಪ್ಪೆನೋ !? ೨೮೪. ಎದೆ ಬಿರಿವನ್ನಕ, ಮನ ದಣಿವನ್ನಕ ನಾಲಗೆ ನಲಿನಲಿದೋಲಾಡುವನ್ನಕ ನಿಮ್ಮ ನಾಮಾಮೃತವ ತಂದಿರಿಸು ಕಂಡ ಎಲೆ ಹರನೆ ಎಲೆ ಶಿವನೆ! ನಿಮ್ಮ ನಾಮಾಮೃತವ ತಂದಿರಿಸು ಕಂಡಾ ಬಿರಿಮುಗುಳಂತೆ ಎನ್ನ ಹೃದಯ ನಿಮ್ಮ ...

ಬಸವಣ್ಣನ ವಚನಗಳು - 271 ರಿಂದ 280 ರವರೆಗೆ

೨೭೧. ಆವನಾದರೇನು ? ಶ್ರೀಮಹಾದೇವನ ನೆನೆವನ ಬಾಯ ತಂಬುಲವ ಮೆಲುವೆ, ಬೀಳುಡಿಗೆಯ ಕಾಯ್ದು ಬದುಕುವೆ ಕೂಡಲಸಂಗಮದೇವ. ೨೭೨. ನಾನು ಹೊತ್ತ ಹುಳ್ಳಿಯನಂಬಲಿಗೆ ಕೊಂಬವರಿಲ್ಲ ನೋಡಯ್ಯ. ಆನು ನಿಮ್ಮ ಶರಣರ ಒಕ್ಕುದನುಂಡು ಬದುಕುವೆನಯ್ಯ. ಮೇರುವ ಸಾರಿದ ಕಾಗೆ ಹೊಂಬಣ್ಣವಪ್ಪುದು ತಪ್ಪದು ಕೂಡಲಸಂಗಮದೇವ. ೨೭೩. ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ. ಅವರೊಕ್ಕುದನುಂಡು, ಮಿಕ್ಕುದನಾಯ್ದುಕೊಂಡಿಪ್ಪ ಕಾರಣ- ಕಾಲ ಮುಟ್ಟಲಮ್ಮದು, ಕಲ್ಪಿತ ತೊಡೆಯಿತ್ತು; ಭವಬಂಧನ ಹಿಂಗಿತ್ತು, ಕರ್ಮನಿರ್ಮಳವಾಯಿತ್ತು. ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು ಕೂಡಲಸಂಗಮದೇವನು ಇತ್ತ ಬಾ ಎಂದೆತ್ತಿಕೊಂಡನು. ೨೭೪ ಜನ್ಮ ಜನ್ಮಕ್ಕೆ ಹೋಗಲೀಯದೆ, "ಸೋಹಂ" ಎಂದೆನಿಸದೆ, 'ದಾಸೋಹಂ' ಎಂದೆನಿಸಯ್ಯ. ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯ ಕೂಡಲಸಂಗಮದೇವ. ೨೭೫. ಕರ್ತರು ನಿಮ್ಮ ಗಣಂಗಳು, ಎನ್ನ ತೊತ್ತ ಮಾಡಿ ಸಲಹಿದ ಸುಖವು ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯದುಂತುಟಲ್ಲ ಕೇಳಿರಯ್ಯ, ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹಿದ ಸುಖವು. ೨೭೬. ತೊತ್ತಿಂಗೆ ಬಲ್ಲಹನೊಲಿದರೆ ಪದವಿಯನೀಯದೆ ಮಾಬನೆ ? ಅಯ್ಯ, ಜೇಡರ ದಾಸಯ್ಯಂಗೊಲಿದಾತ ಮತ್ತೊಬ್ಬ ದೇವನೆ ? ಅಯ್ಯ, ಮಾದರ ಚೆನ್ನಯ್ಯಂಗೆ ಡೋಹರಕಕ್ಕಯ್ಯಂಗೆ, ತೆಲುಗ ಜೊಮ್ಮಯ್ಯಂಗೆ ಒಲಿದಾತ ಮತ್ತೊಬ್ಬ ದೇವನೆ ? ಅಯ್ಯ, ಎನ್ನ ಮನದ ಪಂಚೇಂದ್ರಿಯ ನಿಮ್ಮತ್ತಲ...

ಬಸವಣ್ಣನ ವಚನಗಳು - 261 ರಿಂದ 270 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೬೧. ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ! ಓಡಲಾಗದು ಲೆಂಕನು ಬೇಡಲಾಗದು ಭಕ್ತನು! ಓಡೆನಯ್ಯ, ಬೇಡೆನಯ್ಯ ಕೂಡಲಸಂಗಮದೇವ. ೨೬೨. ಎಲ್ಲಿ ನೋಡಿರಲ್ಲಿ ಮನವೆಳಸಿದರೆ ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ಪರವಧುವನು ಮಾದೇವಿಯೆಂದೇ ಕಾಬೆ ಕೂಡಲಸಂಗಮದೇವ. ೨೬೩. ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ! ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ; ಪರಧನ ಪರಸ್ತ್ರೀಯೆಂಬೀ ಜೂಬಿಂಗಂಜುವೆ! ಮುನ್ನಂಜದ ರಾವಣನೇ ವಿಧಿಯಾದ ಅಂಜುವೆನಯ್ಯ, ಕೂಡಲಸಂಗಮದೇವ! ೨೬೪. ಅಸುರನೈಶ್ವರ್ಯವನೆಣಿಸುವಡೆ- ಸೀತೆಗೆ ಸರಿ-ಮಿಗಿಲೆನಿಸುವ ಸತಿಯರುಂಟು ಕೋಟಿ! ಮತಿವಂತ ಶಿರಃಪ್ರಧಾನರೆಂಟು ಕೋಟಿ! ಲೆಕ್ಕವಿಲ್ಲದ ದಳವು! ಲಕ್ಷ ಕುಮಾರರು! ದಿಕ್ಪಾಲಕರವನ ಮನೆಯ ಬಂಧನದಲಿಪ್ಪರು ಸುರಸತಿಯರನೆಲ್ಲರನಾತ ಸೆರೆಮಾಡಿಯಾಳಿದ! ಶಿವನೇ ನೀ ಕರುಣಿಸಿದಂತಿರದೆ ಪರವಧುವಿನ ಬೇಟವವನ ಪ್ರಾಣವ ಕೊಂಡಿತ್ತು. ಇದನರಿತು ಪರವಧುವಿಗೆಳಸುವವರ ಕಂಡು ಗರುಡ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯ ಕೂಡಲಸಂಗಮದೇವ. ೨೬೫. ಒಂದಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ, ಗಂಡುಗೆದರಿ ಮುಡುಹಿಕ್ಕಿ ಕೆಲೆವರ...

ಬಸವಣ್ಣನ ವಚನಗಳು - 251 ರಿಂದ 260 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೫೧. ಆರಾಧನೆಯ ಮಾಡಿದರೆ ಅಮೃತದ ಬೆಳಸು. ವಿರೋಧಿಸಿದರೆ ವಿಷದ ಬೆಳಸು. ಇದು ಕಾರಣ, ಲಿಂಗ ಜಂಗಮಕ್ಕಂಜಲೇಬೇಕು. ಸ್ಥಾವರ-ಜಂಗಮ ಒಂದೆಂದರಿದರೆ ಕೂಡಲಸಂಗಮದೇವ ಶರಣಾಸನ್ನಿಹಿತನು. ೨೫೨. ಜಂಗಮ ನಿಂದೆಯ ಮಾಡಿ, ಲಿಂಗವ ಪೂಜಿಸುವ ಭಕ್ತನ ಅಂಘವಣೆ ಎಂತೋ ? ಶಿವಶಿವ, ನಿಂದಿಸುವ ಪೂಜಿಸುವ ಪಾತಕವಿದ ಕೇಳಲಾಗದು! "ಗುರುವಿನ ಗುರು ಜಂಗಮ" ಇಂತೆಂದುದು ಕೂಡಲಸಂಗನ ವಚನ. ೨೫೩. ಅರಸರ ಕಂಡು ತನ್ನ ಪುರುಷನ ಮರೆತರೆ ಮರನೇರಿ ಕಯ್ಯ ಬಿಟ್ಟಂತಾದೆನಯ್ಯ! ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ನಮ್ಮ ಕೂಡಲಸಂಗಮದೇವಯ್ಯ ಜಂಗಮಮುಖಲಿಂಗವಾದ ಕಾರಣ. ೨೫೪. ಲಿಂಗದಲ್ಲಿ ದಿಟವನರಸುವಡೆ ಜಂಗಮವ ನೆರೆ ನಂಬುವುದು. ನಡೆ ಲಿಂಗ, ನುಡಿ ಲಿಂಗ ಮುಖ ಲಿಂಗವೆಂದೆ ನಂಬೊ. ಯತ್ರ ಮಾಹೇಶ್ವರಸ್ತತ್ರಾಸನ್ನಹಿತನಾಗಿ, ಅಧರ ತಾಗಿದ ರುಚಿಯನು ಉದರ ತಾಗಿದ ಸುಖವ ಉಂಬ-ಉಡುವ ಕೂಡಲಸಂಗಮದೇವ ಜಂಗಮಮುಖದಲ್ಲಿ. ೨೫೫. ಎಂಬತ್ತುನಾಲ್ಕುಲಕ್ಷ ಮುಖದೊಳಗೊಂದೇ ಮುಖವಾಗಿ ಕಾಡಿ ನೋಡೆನ್ನನು, ಬೇಡಿ ನೋಡೆನ್ನನು ಬೇಡದಿದ್ದರೆ, ಅಯ್ಯ, ನಿಮಗೆ ಪ್ರಮಥರಾಣೆ! ನೀನಾವ ಮುಖದಲ್ಲಿ ಬಂದು ಬೇಡಿದರೀವೆನು ಕೂಡಲಸಂಗಮದ...

ಬಸವಣ್ಣನ ವಚನಗಳು - 241 ರಿಂದ 250 ರವರೆಗೆ

೨೪೧. ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ ? ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ ? ಜಂಗಮವಿಲ್ಲದೆ ಮಾಡಬಹುದೆ, ರೂಢೀಶನ ಭೇದಿಸಬಹುದೆ ? ಒಡಲಿಲ್ಲದ ನಿರಾಳಕರ್ತೃ ಕೂಡಲಸಂಗಮದೇವ ಜಂಗಮಮುಖಲಿಂಗವಾದನಾಗಿ ಮತ್ತೊಂದನರಿಯೆನಯ್ಯ. ೨೪೨. ಕೆಂಡದಲ್ಲಿಟ್ಟರೆ ಕೈ ಬೆಂದುದೆಂಬರು; ಕೊಂಡಿಟ್ಟವನ ಕೈ ಮುನ್ನವೇ ಬೆಂದುದು! ನೊಂದೆ ನಾನು ನೊಂದೆನಯ್ಯ. ಬೆಂದೆ ನಾನು ಬೆಂದೆನಯ್ಯ. ಕೂಡಲಸಂಗನ ಶರಣರ ಕಂಡು ಕಾಣದಂತಿದ್ದರೆ ಅಂದೇ ಬೆಂದೆನಯ್ಯ. ೨೪೩. ಲಾಂಛನವ ಕಂಡು ನಂಬುವೆ, ಅವರಂತರಂಗವ ನೀವೇ ಬಲ್ಲಿರಿ. ತೊತ್ತಿಂಗೆ ತೊತ್ತುಗೆಲಸವಲ್ಲದೆ ಅರಸರ ಸುದ್ದಿ ಎಮಗೇಕಯ್ಯ ? ರತ್ನಮೌಕ್ತಿಕದಚ್ಚು ಕೂಡಲಸಂಗಮದೇವ, ನಿಮ್ಮ ಶರಣರು. ೨೪೪. ಎಡದ ಕೈಯಲ್ಲಿ ನಿಗಳವನಿಕ್ಕಿ, ಬಲದ ಕೈಯ್ಯ ಕಡಿದುಕೊಂಡರೆ, ನೋಯದಿಪ್ಪುದೇ, ಅಯ್ಯ ? ಪ್ರಾಣ ಒಂದಾಗಿ ದೇಹ ಬೇರಿಲ್ಲ. ಲಿಂಗವ ಪೂಜಿಸಿ ಜಂಗಮವನುದಾಸೀನ ಮಾಡಿದರೆ ಬೆಂದೆನಯ್ಯ ನಾನು, ಕೂಡಲಸಂಗಮದೇವ. ೨೪೫. ತನುವ ನೋಯಿಸಿ, ಮನವ ಬಳಲಿಸಿ ನಿಮ್ಮ ಪಾದವಿಡಿದವರೊಳರೆ ? ಈ ನುಡಿ ಸುಡದಿಹುದೆ ? ಕೂಡಲಸಂಗಮದೇವ, ಶಿವಭಕ್ತರ ನೋವೇ ಅದು ಲಿಂಗದ ನೋವು! ೨೪೬. ಕುದುರೆ ಸತ್ತಿಗೆಯವರ ಕಂಡರೆ ಹೊರಳಿಬಿದ್ದು ಕಾಲ ಹಿಡಿವರಯ್ಯ. ಬಡಭಕ್ತರು ಬಂದರೆ, ಎಡೆಯಿಲ್ಲ ಅತ್ತ ಸನ್ನಿ ಎಂಬರು. ಎನ್ನೊಡೆಯ ಕೂಡಲಸಂಗಯ್ಯನವರ ತಡೆಗೆಡಹಿ ಮೂಗ ಕೊಯ್ಯದೆ ಮಾಬನೆ ? ೨೪೭. ಅಡ್ಡದೊಡ್ಡ ನಾನಲ್ಲಯ್ಯ. ದೊಡ್ಡ ಬಸಿರು ಎನಗಿಲ್ಲವಯ್ಯ. ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯ. ಹ...

ಬಸವಣ್ಣನ ವಚನಗಳು - 231 ರಿಂದ 240 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೩೧. ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ! ಆನಂದದಿಂದ ನಲಿನಲಿದಾಡುವೆನು. ಆನಂದದಿಂದ ಕುಣಿಕುಣಿದಾಡುವೆನು. ಕೂಡಲಸಂಗನ ಶರಣರು ಬಂದರೆ ಉಬ್ಬಿಕೊಬ್ಬಿ ಹರುಷದಲೋಲಾಡುವೆನು. ೨೩೨. ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾಯಿತ್ತೆನ್ನ ಭಕ್ತಿ! ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾಯಿತ್ತೆನ್ನ ಭಕ್ತಿ! ಕೂಡಲಸಂಗಮದೇವ, ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ? ೨೩೩. ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ! ಅಂಜುವೆನಂಜುವೆನಯ್ಯ! ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು! ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ, ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ! ೨೩೪. ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ; ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು. ನಾನೇನು ಪಾಪವ ಮಾಡಿದೆನೋ! ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ? ಇರಿಯದ ವೀರ ಇಲ್ಲದ ಸೊಬಗುವ ಎಲ್ಲ ಒಡೆಯರು ಏರಿಸಿ ನುಡಿವರು! ಎನಗಿದು ವಿಧಿಯೇ ಕೂಡಲಸಂಗಮದೇವ ? ೨೩೫. ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ ಹೊಗಳ...

ಬಸವಣ್ಣನ ವಚನಗಳು - 221 ರಿಂದ 230 ರವರೆಗೆ

೨೨೧. ಮೇಲಾಗಲೊಲ್ಲೆ ಕೀಳಾಗಲೊಲ್ಲದೆ! ಕೀಳಿಂಗಲ್ಲದೆ ಹಯನು ಕರೆವುದೆ ? ಮೇಲಾಗಿ ನರಕದಲೋಲಾಡಲಾರೆನು! ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು ಮಹಾದಾನಿ ಕೂಡಲಸಂಗಮದೇವ. ೨೨೨. ಕಾಗೆ ವಿಷ್ಟಿಸುವ ಹೊನ್ನಕಳಶವಹುದರಿಂದ, ಒಡೆಯರು ಜೋಗೈಸುವ ಚಮ್ಮಾವುಗೆಯ ಮಾಡಯ್ಯ. ಅಯ್ಯ, ನಿಮ್ಮ ಶರಣರ ಪಾದಕ್ಕೆ ಚಮ್ಮಾವುಗೆಯ ಮಾಡಯ್ಯ. "ಕರ್ಮಾವಲಂಬಿನಃ ಕೇಚಿತ್ ಕೇಚಿತ್ ಜ್ಞಾನಾವಲಂಬಿನಃ ವಯಂತು ಶಿವಭಕ್ತಾನಾಂ ಪಾದರಕ್ಷಾವಲಂಬಿನಃ" ಕೂಡಲಸಂಗಮದೇವ ನಿಮ್ಮ ಸೆರಗೊಡ್ಡಿ ಬೇಡುವೆನು ಇದೊಂದೇ ವರವ ಕರುಣಿಸಯ್ಯ. ೨೨೩. ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ, ಅಂಬುಜಕ್ಕೆ ಭಾನುವಿನ ಉದಯದ ಚಿಂತೆ. ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ. ಎನಗೆ ನಮ್ಮ ಕೂಡಲಸಂಗಮದೇವರ ನೆನೆವುದೇ ಚಿಂತೆ! ೨೨೪. ಹೊಲಬುಗೆಟ್ಟ ಶಿಶು ತನ್ನ ತಾಯನರಸುವಂತೆ, ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ, ಬಯಸುತ್ತಿದ್ದೆನಯ್ಯ ನಿಮ್ಮ ಭಕ್ತರ ಬರವನು! ಬಯಸುತ್ತಿದ್ದೆನಯ್ಯ ನಿಮ್ಮ ಶರಣರ ಬರವನು! ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ ಎನಗೆ ನಿಮ್ಮ ಶರಣರ ಬರವು ಕೂಡಲಸಂಗಮದೇವ. ೨೨೫. ಸೂರ್ಯನುದಯ ತಾವರೆಗೆ ಜೀವಾಳ! ಚಂದ್ರಮನುದಯ ನೈದಿಲೆಗೆ ಜೀವಾಳ! ಕೂಪರ ಠಾವಿನಲ್ಲಿ ಕೂಟ-ಜೀವಾಳವಯ್ಯ. ಒಲಿದ ಠಾವಿನಲ್ಲಿ ನೋಟ-ಜೀವಾಳವಯ್ಯ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ-ಜೀವಾಳವಯ್ಯ. ೨೨೬. ಕಂಡರೆ ಮನೋಹರವಯ್ಯ, ಕಾಣದಿದ್ದರೆ ಅವಸ್ಥೆ ನೋಡಯ್ಯ. ಹಗಲು ಇರುಳಹುದು; ಇರುಳು ಹಗಲಹುದು. ಇರುಳು ಹಗಲೊಂದು ಜುಗ ಮೇಲೆ ಕೆಡೆದಂ...