Skip to main content

Posts

ಬಸವಣ್ಣನ ವಚನಗಳು - 481 ರಿಂದ 490 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೮೧. ದಿಟ ಮಾಡಿ ಪೂಜಿಸಿದರೆ ಸಟೆ ಮಾಡಿ ಕಳೆವೆ. ಸಟೆ ಮಾಡಿ ಪೂಜಿಸಿದರೆ ದಿಟ ಮಾಡಿ ಕಳೆವೆ. ಏನೆಂಬೆನೆಂತೆಂಬೆ! ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ ಆನು ಮಾಡಿದ ಭಕ್ತಿ ಎನಗಿಂತಾಯಿತ್ತು ಕೂಡಲಸಂಗಮದೇವ. ೪೮೨. ಎಂಬತ್ತೆಂಟು ಪವಾಡವ ಮೆರೆದು ಹಗರಣದ ಚೋಹದಂತಾಯಿತ್ತೆನ್ನ ಭಕ್ತಿ; ತನುವಿನೊಳಗೆ ಮನ ಸಿಲುಕದೆ, ಮನದೊಳಗೆ ತನು ಸಿಲುಕದೆ ತನು ಅಲ್ಲಮನಲ್ಲಿ ಸಿಲುಕಿತ್ತು! ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು ನಾನೇತರಲ್ಲಿ ನೆನೆವೆನಯ್ಯ ಕೂಡಲಸಂಗಮದೇವ ? ! ೪೮೩. ಬಸವ ಬಾರಯ್ಯ, ಮರ್ತ್ಯಲೋಕದೊಳಗೆ ಭಕ್ತರುಂಟೆ ಹೇಳಯ್ಯ ? ಮತ್ತಾರು ಇಲ್ಲಯ್ಯ, ಮತ್ತಾರು ಇಲ್ಲಯ್ಯ ! ನಾನೊಬ್ಬನೇ ಭಕ್ತನು, ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ ಜಂಗಮಲಿಂಗ ನೀನೇ ಅಯ್ಯ ಕೂಡಲಸಂಗಮದೇವ!! ೪೮೪. ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗ, ಶರಣನೈಕ್ಯನು ಮೆಲ್ಲಮೆಲ್ಲನೆ ಆದೆನೆಂಬನ್ನಬರ, ನಾನು ವಜ್ರದೇಹಿಯೆ ? ನಾನೇನು ಅಮೃತವ ಸೇವಿಸಿದೆನೆ ? ನಾನು ಮರುಜೇವಣಿಯ ಕೊಂಡೆನೆ ? ನುಡಿದ ನುಡಿಯೊಳಗೆ ಷಡುಸ್ಥಲ ಬಂದು ನನ್ನ ಮನವನಿಂಬುಗೊಳದಿದ್ದರೆ ಸುಡುವೆನೀ ತನುವ ಕೂಡಲಸಂಗ...

ಬಸವಣ್ಣನ ವಚನಗಳು - 471 ರಿಂದ 480 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೭೧. ಲಗ್ನವೆಲ್ಲಿಯದೋ ವಿಘ್ನವೆಲ್ಲಿಯದೋ ಸಂಗಯ್ಯ ? ದೋಷವೆಲ್ಲಿಯದೋ ದುರಿತವೆಲ್ಲಿಯದೋ ಸಂಗಯ್ಯ ? ನಿಮ್ಮ ಮಾಣದೆ ನೆನೆವಂಗೆ ಭವಕರ್ಮವೆಲ್ಲಿಯದೋ ಕೂಡಲಸಂಗಯ್ಯ! ೪೭೨. ಶರಣ ನಿದ್ರೆಗೈದರೆ ಜಪ ಕಾಣಿರೋ! ಶರಣನೆದ್ದು ಕುಳಿತರೆ ಶಿವರಾತ್ರಿ ಕಾಣಿರೋ! ಶರಣ ನಡೆದುದೇ ಪಾವನ ಕಾಣಿರೋ! ಶರಣ ನುಡಿದುದೇ ಶಿವತತ್ವಕಾಣಿರೋ ಕೂಡಲಸಂಗನ ಶರಣನ ಕಾಯವೇ ಕೈಲಾಸ ಕಾಣಿರೋ! ೪೭೩. ಸಮುದ್ರ ಘನವೆಂಬೆನೆ ? ಧರೆಯ ಮೇಲಡಗಿತ್ತು! ಧರೆ ಘನವೆಂಬೆನೆ ? ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು! ನಾಗೇಂದ್ರ ಘನವೆಂಬೆನೆ ? ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು! ಅಂಥ ಪಾರ್ವತಿ ಘನವೆಂಬೆನೆ ? ಪರಮೇಶ್ವರನ ಅರ್ಧಾಂಗಿಯಾದಳು! ಅಂಥ ಪರಮೇಶ್ವರ ಘನವೆಂಬೆನೆ ? ನಮ್ಮ ಕೂಡಲಸಂಗನ ಶರಣರ ಮನದ ಕೊನೆಯ ಮೊನೆಯ ಮೇಲಡಗಿದನು! ೪೭೪. ನೆಲನೊಂದೇ ಹೊಲೆಗೇರಿ, ಶಿವಾಲಯಕ್ಕೆ! ಜಲವೊಂದೇ ಶೌಚಾಚಮನಕ್ಕೆ! ಕುಲವೊಂದೇ ತನ್ನ ತಾನರಿದವಂಗೆ! ಫಲವೊಂದೇ ಷಡುದರ್ಶನ ಮುಕ್ತಿಗೆ! ನಿಲವೊಂದೇ, ಕೂಡಲಸಂಗಮದೇವ, ನಿಮ್ಮನರಿದವಂಗೆ. ೪೭೫. ಅಯ್ಯಾ, ಸಜ್ಜನ ಸದ್ಭಕ್ತರ ಸಂಗದಿಂದ ಮಹಾನುಭಾವರ ಕಾಣಬಹುದು! ಮ...

ಬಸವಣ್ಣನ ವಚನಗಳು - 461 ರಿಂದ 470 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೬೧. ಅಡಿಗಡಿಗೆ ಸ್ಥಾನನಿಧಿ! ಅಡಿಗಡಿಗೆ ದಿವ್ಯಕ್ಷೇತ್ರ! ಅಡಿಗಡಿಗೆ ನಿಧಿಯು ನಿಧಾನ! ನೋಡಾ! ಆತನಿರವೇ ಅವಿಮುಕ್ತ ಕ್ಷೇತ್ರ, ಕೂಡಲಸಂಗನ ಶರಣ ಸ್ವತಂತ್ರನಾಗಿ. ೪೬೨. ಧನದಲ್ಲಿ ಶುಚಿ, ಪ್ರಾಣದಲ್ಲಿ ನಿರ್ಭಯ ಇದಾವಂಗಳವಡುವುದಯ್ಯ ? ನಿಧಾನ ತಪ್ಪಿ ಬಂದರೆ ಒಲ್ಲೆನೆಂಬವರಿಲ್ಲ! ಪ್ರಮಾದವಶ ಬಂದರೆ ಹುಸಿಯೆನೆಂಬವರಿಲ್ಲ! ನಿರಾಶೆ, ನಿರ್ಭಯ, ಕೂಡಲಸಂಗಮದೇವ, ನೀನೊಲಿದ ಶರಣಂಗಲ್ಲದಿಲ್ಲ! ೪೬೩. ಹಲಬರ ನುಂಗಿದ ಹಾವಿಂಗೆ ತಲೆ-ಬಾಲವಿಲ್ಲ ನೋಡಾ! ಕೊಲುವುದು ತ್ರೈಜಗವೆಲ್ಲವ! ತನಗೆ ಬೇರೆ ಪ್ರಳಯವಿಲ್ಲ!! ನಾಕಡಿಯನೆಯ್ದದು, ಲೋಕದ ಕಡೆಯನೇ ಕಾಬುದು! ಸೂಕ್ಷ್ಮಪಥದಲ್ಲಿ ನಡೆವುದು, ತನಗೆ ಬೇರೊಡಲಿಲ್ಲ! ಅಹಂಕಾರವೆಂಬ ಗಾರುಡಿಗನ ನುಂಗಿತ್ತು ಕೂಡಲಸಂಗನ ಶರಣರಲ್ಲದುಳಿದವರ. ೪೬೪. ಉಂಬ ಬಟ್ಟಲು ಬೇರೆ ಕಂಚಲ್ಲ! ನೋಡುವ ದರ್ಪಣ ಬೇರೆ ಕಂಚಲ್ಲ! ಭಾಂಡ, ಭಾಜನ ಒಂದೆ! ಬೆಳಗೆ ಕನ್ನಡಿಯೆನಿಸಿತ್ತಯ್ಯ! ಅರಿದರೆ ಶರಣನು, ಮರೆದರೆ ಮಾನವನು! ಮರೆಯದೆ ಪೂಜಿಸು ಕೂಡಲಸಂಗನ. ೪೬೫. ಕೆರೆ ಹಳ್ಳ ಭಾವಿಗಳು ಮೈದೆಗೆದರೆ ಗುಳ್ಳೆ, ಗೊರಚೆ, ಚಿಪ್ಪು ಕಾಣಬಹವು! ವಾರಿಧಿ ಮೈದೆಗೆದರೆ...

ಬಸವಣ್ಣನ ವಚನಗಳು - 451 ರಿಂದ 460 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೫೧. ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ, ಆತ್ಮನ ಗುಣವುಂಟೆ ? ಗುರುಕಾರುಣ್ಯವಾಗಿ, ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೇ ಗತಿಯಾಗಿದ್ದೆ ಕೂಡಲಸಂಗಮದೇವ. ೪೫೨. ಮಾಡುವಾತ ನಾನಲ್ಲಯ್ಯ, ನೀಡುವಾತ ನಾನಲ್ಲಯ್ಯ, ಬೇಡುವಾತ ನಾನಲ್ಲಯ್ಯ, ನಿಮ್ಮ ಕಾರುಣ್ಯವಲ್ಲದೆ, ಎಲೆ ದೇವಾ! ಮನೆಯ ತೊತ್ತಲಸಿದರೆ ಒಡತಿ ಮಾಡಿಕೊಂಬಂತೆ ನಿನಗೆ ನೀ ಮಾಡಿಕೋ ಕೂಡಲಸಂಗಮದೇವಾ! ೪೫೩. ಪರಿಯಾಣವೇ ಭಾಜನವೆಂಬರು ಪರಿಯಾಣ ಭಾಜನವಲ್ಲ ಲಿಂಗಕ್ಕೆ! ತನ್ನ ಮನವೇ ಭಾಜನ! ಪ್ರಾಣವನು ಬೀಸರವೋಗದೆ ಮೀಸಲಾಗರ್ಪಿಸಬಲ್ಲಡೆ, ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ. ೪೫೪. ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ. ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯ. ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ. ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯ. ಕೂಡಲಸಂಗನ ಶರಣರನುಭಾವದಿಂದ ಎನ್ನ ಭವದ ಕೇಡು ನೋಡಯ್ಯ. ೪೫೫. ಆಲಿಕಲ್ಲ ಹರಳಿನಂತೆ, ಅರಗಿನ ಪುತ್ಥಳಿಯಂತೆ ತನು ಕರಗಿ ನೆರೆವ ಸುಖವ ನಾನೇನೆಂಬ! ಕಡೆಗೋಡಿವರಿದವೆನಗಯ್ಯ ನಯನದ ಸುಖಜಲಂಗಳು! ನಮ್ಮ ಕೂಡಲಸಂಗಮದೇವರ ಮುಟ್ಟಿ ನ...

ಬಸವಣ್ಣನ ವಚನಗಳು - 441 ರಿಂದ 450 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೪೧. ಅರಿದರಿದು ಸಮಗಾಣಿಸಬಾರದು ? ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದರೆ ಈಶ್ವರನು ಒಡೆಯಿಕ್ಕದೆ ಮಾಣುವನೆ ? ಪಾತ್ರಾಪಾತ್ರವೆಂದು ಕಂಡರೆ ಶಿವನೆಂತು ಮೆಚ್ಚುವನೊ ? ಜೀವಜೀವಾತ್ಮವ ಸರಿಯೆಂದು ಕಂಡರೆ ಸಮವೇದಿಸದಿಪ್ಪನೇ ಶಿವನು ? ತನ್ನ ಮನದಲ್ಲಿ "ಯತ್ರ ಜೀವಸ್ತತ್ರ ಶಿವ"ನೆಂದು ಸರ್ವಜೀವದಯಾಪಾರಿಯಾದರೆ ಕೂಡಲಸಂಗಮದೇವನು ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ ? ೪೪೨. ಮುತ್ತು ಉದಕದಲಾಗದು, ಉದಕ ಮುತ್ತಿನೊಲಾಗದು, ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ! ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ, ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ ಶಿವತತ್ತ್ವ ಸಾಹಿತ್ಯವಾಗದು. ೪೪೩. ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ ಶೈತ್ಯವ ತೋರುವ ಪರಿಯೆಂತೋ ? ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ ಉಷ್ಣವ ತೋರುವ ಪರಿಯೆಂತೋ ? ಶರಣಂಗೆ ಭಕ್ತಿಕಾಯವಿಲ್ಲದನ್ನಕ ಕೂಡಲಸಂಗನನರಿವ ಪರಿಯೆಂತೋ ? ೪೪೪. ಮುನ್ನೂರರುವತ್ತು ನಕ್ಷತ್ರಕ್ಕೆ ಬಾಯ ಬಿಟ್ಟುಕೊಂಡಿಪ್ಪುದೇ ಸಿಂಪು ? ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳಾ ಕೇಳು ತಂ...

ಬಸವಣ್ಣನ ವಚನಗಳು - 431 ರಿಂದ 440 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೩೧. ಶಿವಾಚಾರವೆಂಬುದೊಂದು ಬಾಳ ಬಾಯಿಧಾರೆ ಲಿಂಗ ಮೆಚ್ಚಬೇಕು; ಜಂಗಮ ಮೆಚ್ಚಬೇಕು ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು. ಬಿಚ್ಚಿ ಬೇರಾದರೆ ಮೆಚ್ಚ ನಮ್ಮ ಕೂಡಲಸಂಗಮದೇವ. ೪೩೨. ಆವಾವ ಭಾವದಲ್ಲಿ ಶಿವನ ನಂಬಿದ ಶರಣರು ಎಂತಿದ್ದರೇನಯ್ಯ ? ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು ಎಂತಿದ್ದರೇನಯ್ಯ ? ಸುಚರಿತ್ರರೆಂತಿದ್ದರೇನಯ್ಯ ? ಅವಲೋಹವ ಕಳೆವ ಪರುಷವೆಂತಿದ್ದರೇನಯ್ಯ ? ಕೂಡಲಸಂಗನ ಶರಣರು ರಸದ ವಾರಿಧಿಗಳು ಎಂತಿದ್ದರೇನಯ್ಯ ? ೪೩೩. ನಡೆ ಚೆನ್ನ, ನುಡಿ ಚೆನ್ನ, ಎಲ್ಲಿ ನೋಡಿದರಲ್ಲಿ ಚೆನ್ನ! ಪ್ರಮಥರೊಳಗೆ ಚೆನ್ನ, ಪುರಾತರೊಳಗೆ ಚೆನ್ನ! ಪ್ರಸಾದಿಗಳೊಳಗೆ ಚೆನ್ನ! ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು ಕೂಡಲಸಂಗಮದೇವರಿಗೆ ಬೇಕಾಯಿತ್ತೆಂದು ಕೈದೆಗೆದ ನಮ್ಮ ಚೆನ್ನ! ೪೩೪. ಲಿಂಗವಿಕಾರಿಗೆ ಅಂಗವಿಕಾರವೆಂಬುದಿಲ್ಲ. ಜಂಗಮವಿಕಾರಿಗೆ ಧನವಿಕಾರವೆಂಬುದಿಲ್ಲ. ಪ್ರಸಾದವಿಕಾರಿಗೆ ಮನವಿಕಾರವೆಂಬುದಿಲ್ಲ. ಇಂತೀ ತ್ರಿವಿಧಗುಣವನರಿದಾತನು ಅಚ್ಚಲಿಂಗೈಕ್ಯನು ಕೂಡಲಸಂಗಮದೇವ. ೪೩೫. ಪ್ರಾಣಲಿಂಗಪ್ರತಿಗ್ರಾಹಕನಾದ ಬಳಿಕ ಲಿಂಗವಿರಹಿತವಾಗಿ ನಡೆವ ಪರಿಯೆಂತೊ...

ಬಸವಣ್ಣನ ವಚನಗಳು - 421 ರಿಂದ 430 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೨೧. ಸೂಳೆಗೆ ಮೆಚ್ಚಿ ಸೂಳೆಯ ಬಂಟರೆಂಜಲ ತಿಂಬುದೀ ಲೋಕವೆಲ್ಲ! ಅಡಗ ವೆಚ್ಚಿ ಸೊಣಗನೆಂಜಲ ತಿಂಬುದೀ ಲೋಕವೆಲ್ಲ! ಲಿಂಗವ ಮೆಚ್ಚಿ ಜಂಗಮಪ್ರಸಾದವ ಕೊಂಬರ ನೋಡಿ ನಗುವವರ ಕುಂಭೀಪಾಕ ನಾಯಕನರಕದಲಿಕ್ಕುವ ಕೂಡಲಸಂಗಮದೇವ. ೪೨೨. ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ? ಕುಲವುಂಟೇ ಜಂಗಮವಿದ್ದೆಡೆಯಲ್ಲಿ ? ಎಂಜಲುಂಟೇ ಪ್ರಸಾದವಿದ್ದೆಡೆಯಲ್ಲಿ ? ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ, ನಿಜೈಕ್ಯ, ತ್ರಿವಿಧನಿರ್ಣಯ ಕೂಡಲಸಂಗಮದೇವ, ನಿಮ್ಮ ಶರಣರಿಗಲ್ಲದಿಲ್ಲ. ೪೨೩. ಹುತ್ತದ ಮೇಲಣ ರಜ್ಜು ಮುಟ್ಟಿದರೆ ಸಾವರು ಶಂಕಿತರಾದವರು! ಸರ್ಪದಷ್ಟವಾದರೆಯೂ ಸಾಯರು ನಿಶ್ಶಂಕಿತರಾದವರು! ಕೂಡಲಸಂಗಮದೇವಯ್ಯ, ಶಂಕಿತಂಗೆ ಪ್ರಸಾದ ಕಾಳಕೂಟವಿಷವು! ೪೨೪. ನಂಬಿದರೆ ಪ್ರಸಾದ ನಂಬದಿದ್ದರೆ ವಿಷವು! ತುಡುಕಬಾರದು ನೋಡಾ ಲಿಂಗನ ಪ್ರಸಾದ! ಸಂಗನ ಪ್ರಸಾದ! ಕೂಡಲಸಂಗನ ಪ್ರಸಾದ ಸಿಂಗಿ-ಕಾಳಕೂಟ ವಿಷವು. ೪೨೫. ಪಂಡಿತನಾಗಲಿ ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಬಿಡದು. ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದು- ಎಂದು ಶ್ರುತಿ ಸಾರುತ್ತೈದಾವೆ- ನೋಡಾ, ತಾನಾವ ಲೋಕದೊಳಗಿದ್...