Skip to main content

Posts

ಅಕ್ಕನ ವಚನಗಳು - 261 ರಿಂದ 270 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೬೧. ಅಂಗದೊಳಗೆ ಅಂಗವಾಗಿ ಅಂಗಲಿಂಗೈಕ್ಯವ ಮಾಡಿದೆ ಮನದೊಳಗೆ ಮನವಾಗಿ ಮನ ಲಿಂಗೈಕ್ಯವ ಮಾಡಿದೆ ಭಾವದೊಳಗೆ ಭಾವವಾಗಿ ಭಾವಲಿಂಗೈಕ್ಯವ ಮಾಡಿದೆ ಅರಿವಿನೊಳಗೆ ಅರಿವಾಗಿ ಜ್ಞಾನಲಿಂಗೈಕ್ಯವ ಮಾಡಿದೆ ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ ನಿವೃತ್ತಿಲಿಂಗೈಕ್ಯವ ಮಾಡಿದೆ ನಾನೆಂಬುದ ನಿಲಿಸಿ ನೀನೆಂಬುದ ಕೆಡಿಸಿ ಉಭಯಲಿಂಗೈಕ್ಯವ ಮಾಡಿದೆ ಚೆನ್ನಮಲ್ಲಿಕಾರ್ಜುನನೊಳಗೆ ನಾನಳಿದೆನಾಗಿ ಲಿಂಗವೆಂಬ ಘನವು ಎನ್ನಲ್ಲಿ ಅಳಿಯಿತ್ತು [=ಉಳಿಯಿತ್ತು?] ಕಾಣಾ ಸಂಗನಬಸವಣ್ಣ ೨೬೨. ಎನ್ನ ಭಕ್ತಿ ನಿಮ್ಮ ಧರ್ಮ ಎನ್ನ ಜ್ಞಾನ ಪ್ರಭುದೇವರ ಧರ್ಮ ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ ಈ ಮೂವರೂ ಒಂದೊಂದ ಕೊಟ್ಟರೆನಗೆ- ಮೂರು ಭಾವವಾಯಿತ್ತು ಈ ಮೂರನು ನಿನ್ನಲ್ಲಿ ಸಮರ್ಪಿಸಿದ ಬಳಿಕ ಎನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ ನಿನ್ನ ಕರುಣದ ಶಿಶು ನಾನು ಕಾಣಾ ಸಂಗನಬಸವಣ್ಣ ೨೬೩. ಲಿಂಗ ಸುಖಸಂಗದಲ್ಲಿ ಮನ ವೇದ್ಯವಾಯಿತ್ತು ಇನ್ನೆಲ್ಲಿಯದಯ್ಯ ಎನಗೆ ನಿಮ್ಮಲ್ಲಿ ನಿರವಯವು? ಇನ್ನೆಲ್ಲಿಯದಯ್ಯ ನಿಮ್ಮಲ್ಲಿ ಕೂಡುವುದು? ಪರಮಸುಖಪರಿಣಾಮ ಮನ ಮೇರೆದಪ್ಪಿ ನಾನು ನಿಜವನೈದುವ ಠ...

ಅಕ್ಕನ ವಚನಗಳು - 251 ರಿಂದ 260 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೫೨. ಊಡಿದಡುಣ್ಣದು, ನೀಡಿದಡರಿಯದು ಕಾಣದು ಬೇಡದು, ಒಲಿಯದು ನೋಡಾ ಊಡಿದರುಂಡು ನೀಡೀದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ ಕಾಣಾ ಚೆನ್ನಮಲ್ಲಿಕಾರ್ಜುನ ೨೫೩. ಕಾಯ ಪ್ರಸಾದವೆನ್ನ ಮನ ಪ್ರಸಾದವೆನ್ನ ಪ್ರಾಣ ಪ್ರಸಾದವೆನ್ನ ಭಾವ ಪ್ರಸಾದವೆನ್ನ ಸೈಧಾನ ಪ್ರಸಾದವೆನ್ನ ಸಮಭೋಗ ಪ್ರಸಾದವೆನ್ನ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಪ್ರಸಾದವ ಹಾಸಿ ಹೊದಿಸಿಕೊಂಡಿಪ್ಪೆ ೨೫೪. ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ ವಿಧಿಯ ಮೀರುವ ಅಮರರಿಲ್ಲ ಕ್ಷುಧೆ-ವ್ಯಸನ-ವಿಧಿಗಂಜಿ ನಾ ನಿಮ್ಮ ಮರೆವೊಕ್ಕು ಚೆನ್ನಮಲ್ಲಿಕಾರ್ಜುನ ಬದುಕಿದೆ ೨೫೫. ಅರಿದೆನೆಂದೆಡೆ ಅರಿಯಬಾರದು ನೋಡಾ ಘನಕ್ಕೆ ಘನ ತಾನೆ ನೋಡಾ ಚೆನ್ನಮಲ್ಲಿಕಾರ್ಜುನನ ನಿರ್ಣಯವಿಲ್ಲದೆ ಸೋತೆನು ೨೫೬. ಎನ್ನಂತೆ ಪುಣ್ಯಂಗೆಯ್ದವರುಂಟೆ? ಎನ್ನಂತೆ ಭಾಗ್ಯಂಗೆಯ್ದವರುಂಟೆ? ಕಿನ್ನರನಂತಪ್ಪ ಸೋದರನೆನಗೆ ಏಳೇಳು ಜನ್ಮದಲ್ಲಿ ಶಿವಭಕ್ತರೇ ಬಂಧುಗಳೆನಗೆ ಚೆನ್ನಮಲ್ಲಿಕಾರ್ಜುನನಂತಪ್ಪ ಗಂಡ ನೋಡಾ ಎನಗೆ ೨೫೭. ಅಯ್ಯಾ ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯ ಅಯ್...

ಅಕ್ಕನ ವಚನಗಳು - 241 ರಿಂದ 250 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೪೧. ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕಂಡೆನ್ನ ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನೆದೆನ್ನ ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿಯೆನ್ನ ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿಯೆನ್ನ ಘ್ರಾಣ ಶುದ್ಧವಾಯಿತ್ತು ನಿಮ್ಮ ಪಾದಾರ್ಪಿತ ಪರಿಮಳವ ವಾಸಿಸಿಯೆನ್ನ ಜಿಹ್ವೆ ಶುದ್ಧವಾಯಿತ್ತು ನಿಮ್ಮ ಶರಣರೊಕ್ಕುದ ಕೊಂಡೆನಾಗಿ ಭಾವನೆಯೆನಗಿದು ಜೀವನ ಕೇಳಾ ಲಿಂಗ ತಂದೆ ನೆಟ್ಟನೆ ನಿಮ್ಮ ಮನ ಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನ ೨೪೨. ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ ಛಲಮದವೆಂಬುದಿಲ್ಲ ಪ್ರತಿದೂರನಾಗಿ ಧನಮದವೆಂಬುದಿಲ್ಲ ತ್ರಿಕರಣಶುದ್ಧನಾಗಿ ವಿದ್ಯಾಮದವೆಂಬುದಿಲ್ಲ ಅಸಾಧ್ಯವ ಸಾಧಿಸಿದೆನಾಗಿ ಮತ್ತಾವ ಮದವಿಲ್ಲ ನೀನವಗವಿಸಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಶರಣ ಅಕಾಯಚರಿತ್ರನಾಗಿ ೨೪೩. ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿಯ ಅಳೆದು ತೀರದ ಮುನ್ನ ಶಿವನ ನೆನೆಯಿರೇ! ಶಿವನ ನೆನೆಯಿರೇ! ಈ ಜನ್ಮ ಬಳಿಕಿಲ್ಲ ಚೆನ್ನಮಲ್ಲಿಕಾರ್ಜುನದೇವರ ದೇವ ಪಂಚಮಹಾಪಾತಕರೆಲ್ಲ ಮುಕ್ತಿವಡೆದರು ೨೪೪. ಕರುವಿನ ರೂಹು ಅ...

ಅಕ್ಕನ ವಚನಗಳು - 231 ರಿಂದ 240 ರವರೆಗೆ

೨೩೧. ತನುವ ಮೀರಿತ್ತು, ಮನವ ಮೀರಿತ್ತು ಮಹವ ಮೀರಿತ್ತು ಅಲ್ಲಿಂದತ್ತ ಭಾವಿಸುವ ಭಾವಕರಿಲ್ಲಾಗಿ ತಾರ್ಕಣೆಯಿಲ್ಲ ಚೆನ್ನಮಲ್ಲಿಕಾರ್ಜುನಯ್ಯ ಬೆರಸಲಿಲ್ಲದ ನಿಜತತ್ವವು ೨೩೨. ಆಧಾರ-ಸ್ವಾಧಿಷ್ಠಾನ-ಮಣಿಪೂರಕ- ಅನಾಹುತ-ವಿಶುದ್ಧಿ-ಆಜ್ಞೇಯವ ನುಡಿದರೇನು? ಆದಿಯನಾದಿಯ [ಸುದ್ದಿಯ] ಕೇಳಿದಡೇನು, ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ ಉನ್ಮನಿರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲಯದವರು? ೨೩೩. ನಿತ್ಯವೆಂಬ ನಿಜಪದವೆನ್ನ ಹತ್ತೆ ಸಾರ್ದುದ ಕಂಡ ಬಳಿಕ ಚಿತ್ತ ಕರಗಿ ಮನ ಕೊರಗಿ ಹೃದಯವರಳಿತು ನೋಡಯ್ಯ ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯ ೨೩೪. ಆಶೆಯಾಮಿಷವಳಿದು ಹುಸಿ ವಿಷಯಂಗಳೆಲ್ಲಾ ಹಿಂಗಿ ಸಂಶಯಸಂಬಂಧ ವಿಸಂಬಂಧವಾಯಿತ್ತು ನೋಡಾ ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯ ಚೆನ್ನಮಲ್ಲಿಕಾರ್ಜುನ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯ ೨೩೫. ಆದಿಅನಾದಿಯ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ ಆ ಪರಬ್ರಹ್ಮದ ನಿಲವ? ಅದೆಂತೆಂದಡೆ ಆದಿಯೇ ದೇಹ, ಅನಾದಿಯೇ ನಿರ್ದೇಹ ಆದಿಯೇ ಸಕಲ, ಅನಾದಿಯೇ ನಿಷ್ಕಲ ಆದಿಯೇ ಜಡ, ಅನಾದಿಯೇ ಅಜಡ ಆದಿಯೇ ಕಾಯ, ಅನಾದಿಯೇ ಪ್ರಾಣ ಈ ಎರಡರ ಯೋಗವ ಭೇದಿಸಿ ತನ್ನಿಂದ ತಾ ತಿಳಿದು ನೋಡಲು ಆದಿಸಂಬಂಧಮಪ್ಪ ಭೂ...

ಅಕ್ಕನ ವಚನಗಳು - 221 ರಿಂದ 230 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.     ೨೨೧. ಸದ್ಗುರುಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ ತತ್ ಶಿಷ್ಯನ ಮಸ್ತಕದ ಮೇಲೆ ತನ್ನ ಶ್ರೀಹಸ್ತವನಿರಿಸಿದಡೆ ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯ ಒಪ್ಪುವ ಶ್ರೀವಿಭೂತಿಯ ನೊಸಲಿಂಗೆ ಪಟ್ಟವ ಕಟ್ಟಿದಡೆ ಮುಕ್ತಿಸಾಮ್ರಾಜ್ಯದೊಡೆತನಕ್ಕೆ ಪಟ್ಟವ ಕಟ್ಟಿದಂತಾಯಿತ್ತಯ್ಯ ಸದ್ಯೋಜಾತ-ವಾಮದೇವ-ಅಘೋರ-ತತ್ಪುರುಷ-ಈಶಾನವೆಂಬ ಪಂಚಕಲಶದ ಅಭಿಷೇಕವ ಮಾಡಿಸಲು ಶಿವನ ಕಾರುಣ್ಯಾಮೃತದ ಸೋನೆ ಸುರಿದಂತಾಯಿತ್ತಯ್ಯ ನೆರೆದ ಶಿವಂಗಳ ಮಧ್ಯದಲ್ಲಿ ಮಹಾಲಿಂಗವನು ಕರಸ್ಥಲಾಮಲಕವಾಗಿ ಶಿಷ್ಯನ ಕರಸ್ಥಲಕ್ಕೆ ಇಟ್ಟು, ಅಂಗದಲ್ಲಿ ಪ್ರತಿಷ್ಠಿಸಿ ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ ಕಂಕಣವ ಕಟ್ಟಿದಲ್ಲಿ ಕಾಯವೇ ಕೈಲಾಸವಾಯಿತ್ತು ಪ್ರಾಣವೇ ಪಂಚಬ್ರಹ್ಮಮಯ ಲಿಂಗವಾಯಿತ್ತು ಇಂದು ಮುಂದ ತೋರಿ ಹಿಂದ ಬಿಡಿಸಿದ ಶ್ರೀಗುರುವಿನ ಸಾನಿದ್ಧ್ಯದಿಂದಾನು ಬದುಕಿದೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ೨೨೨. ನಮ್ಮ ಮನೆಯಲಿಂದು ಹಬ್ಬ ನಮಗೆ ಸಂದಣಿ ಬಹಳ ಒಮ್ಮೆ ನುಡಿಸ ಹೊತ್ತಿಲ್ಲ ಹೋಗಿ ವಿಷಯಗಳಿರಾ ತನುವೆಂಬ ಮನೆಯೊಳಗೆ ನೆಲಸಿಪ್ಪ ಪರಮಾತ್ಮ ಮನೆಯ ದೇವರ ಹಬ್ಬ! ಆ ಹಬ್ಬಕಿಂದು ನೆನೆಯದೆ...

ಅಕ್ಕನ ವಚನಗಳು - 211 ರಿಂದ 220 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೧೧. ಅಂಗಸಂಗಿಯಾಗಿ ಸಂಬಂಧಿಯಲ್ಲ ಲಿಂಗದೊಳಗಾಪ್ಯಾಯಿನಿಯಾಗಿ ಇತರ ಸು- ಖಂಗಳ ಬಿಟ್ಟು ಕಳೆದು ಸಮನ ಸಾರಾಯನಾದ ಶರಣನು ||ಪಲ್ಲವ|| ಗುರುಕರುಣಸಂಗದಿಂದ ಶಿಷ್ಯನಿಂತು ಕರದಲ್ಲಿ ಹುಟ್ಟಿದನು ಕರಣಸಹಿತ ಅವಗ್ರಾಹಿಯಾಗಿ ಘಾಳಿ ಸುಳುಹಡಗಿದ ಶರಣನು ||೧|| ಆಸೆಯೆಂಬ ಹದನುಳುಹಾಗಿ ಹಿಡಿದ ಛಲ ಬಿಡದೆಂಬ ಬೇರೂರಿ ಸಂಕಲ್ಪವಿಕಲ್ಪಗಳೆರಡೂ ಇಲ್ಲದೆ ನಿಃಕಳಂಕನಾದನು ಶರಣನು ||೨|| ಮಾಡುವವರ ಕಂಡು ಮಾಡುವವನಲ್ಲ ಮಾಡದವರ ಕಂಡು ಮಾಡದವನಲ್ಲ ತಾ ಮಾಡುವ ಮಾಟಕೆ ತವಕಿಗನಾಗಿಪ್ಪ ಹಿಂದುಮುಂದರಿಯದ ಶರಣನು ||೩|| ಎಲ್ಲವು ತಾನೆಂಬ ಕರುಣಾಕರನಲ್ಲ ನಿಃಕರುಣಿಯಾಗಿ ಜಡದೇಹಿಯಲ್ಲ ಭೋಗಿಪ ಭೋಗಂಗಳಾಮಿಷ ತಾಮಸ ವಿಷಯವಿರಹಿತನು ಶರಣನು ||೪|| ಘನವನಿಂಬುಗೊಂಡ ಮನದ ಬೆಂಬಳಿವಿಡಿದುಳೆದಲ್ಲಿ ನಿಜವಾಗಿ ನಿಂದನು ತಾನೆಂಬುದಿಲ್ಲ ನಿರಂತರ ಸದ್ಗುರು ಚೆನ್ನಮಲ್ಲಿಕಾರ್ಜುನ ನಿಮ್ಮ ಶರಣ ಬಸವಣ್ಣನು ||೫|| ೨೧೨. ಅಂಗದಲ್ಲಿ ಲಿಂಗಸಂಗ ಲಿಂಗದಲ್ಲಿ ಅಂಗಸಂಗ ಮಾಡಿದನೆಂದರೆ ಎನ್ನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನನ ಸ್ನೇಹದಲ್ಲಿ ನಿನ್ನ ಕರುಣದ ಶಿಶು ನಾನು ಕಾಣ ಸಂಗನಬಸವಣ್ಣ ೨೧೩. ಲಿ...

ಅಕ್ಕನ ವಚನಗಳು - 201 ರಿಂದ 210 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೦೧. ಭಕ್ತೆ ಏನಪ್ಪೆನಯ್ಯ ಕರ್ತೃ-ಭೃತ್ಯತ್ವವ ನಾನರಿಯೆ ಮಾಹೇಶ್ವರಿ ಏನಪ್ಪೆನಯ್ಯ? ವ್ರತ-ನೇಮ-ಛಲವ ನಾನರಿಯೆ ಪ್ರಸಾದಿ ಏನಪ್ಪೆನಯ್ಯ? ಅರ್ಪಿತಾನರ್ಪಿತವೆಂಬ ಭೇದವ ನಾನರಿಯೆ ಪ್ರಾಣಲಿಂಗಿ ಏನಪ್ಪೆನಯ್ಯ? ಅನುಭಾವದ ಗಮನವ ನಾನರಿಯೆ ಶರಣೆ ಏನೆಪ್ಪೆನಯ್ಯ? ಶರಣಸತಿ-ಲಿಂಗಪತಿಯೆಂಬ ಭಾವವ ನಾನರಿಯೆ ಐಕ್ಯೆ ಏನೆಪ್ಪೆನಯ್ಯ? ಬೆರಸಿದ ಭೇದವ ನಾನರಿಯೆ ಚೆನ್ನಮಲ್ಲಿಕಾರ್ಜುನಯ್ಯ, ಷಟ್ಸ್ಥಲದಲ್ಲಿ ನಿಸ್ಥಲವಾಗಿಪ್ಪೆನು ೨೦೨. ಬಸವಣ್ಣ, ಎನ್ನ ಭಕ್ತಿ ನಿಮ್ಮ ಧರ್ಮ ಎನ್ನ ಜ್ಞಾನ ಪ್ರಭುದೇವರ ಧರ್ಮ ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ ಇಂತೀ ಮೂವರೂ ಒಂದೊಂದ ಕೊಟ್ಟ ಕಾರಣ ಎನಗೆ ಮೂರು ಭಾವವಾಯಿತ್ತು ಆ ಮೂರು ಭಾವವ ನಿಮ್ಮಲ್ಲಿ ಸಮರ್ಪಿಸಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ನೆನಹಾದಲ್ಲಿ ನಿಮ್ಮ ಕರುಣದ ಕಂದನು ಕಾಣಾ ಚೆನ್ನಬಸವಣ್ಣ ೨೦೩. ಸಂಗನ ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ನಾಸ್ತಿಯಾಯಿತ್ತು ಪ್ರಭುವೇ ! ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನಗೆ ಅರಿವು ಸ್ವಯವಾಯಿತ್ತು ಚೆನ್ನಮಲ್ಲಿಕಾರ್ಜುನಯ್ಯ...