Skip to main content

Posts

ಅಕ್ಕನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೇ ಪುರಾತನರ ಮನೆಯ ಅಂಗಳದಲ್ಲಿ ಅಷ್ಟಾಷಷ್ಟಿತೀರ್ಥಂಗಳು ನೆಲೆಸಿಪ್ಪವಾಗಿ? ಅದೆಂತೆಂದಡೆ: ಕೇದಾರಸ್ಯೋದಕೇ ಪೀತೇ ವಾರಣಸ್ಯಾಂ ಮೃತೇ ಸತಿ ಶೀಶೈಲ ಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ಎಂಬ ಶಬ್ದಕ್ಕಧಿಕವು ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ ಅಲ್ಲಿಂದ ಹೊರಗೆ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ ನಿಮ್ಮ ಭಕ್ತರ ಮನೆಯಂಗಳ ವಾರಣಾಸಿಯಿಂದ ಗುಂಜಿಯಧಿಕ ನೋಡಾ! ೩೩೨. ನಿನ್ನ ಅಂಗದಾಚಾರವ ಕಂಡು ಎನಗೆ ಲಿಂಗಸಂಗವಾಯಿತ್ತಯ್ಯ, ಬಸವಣ್ಣ ನಿನ್ನ ಮನದ ಸುಜ್ಞಾನವ ಕಂಡು ಎನಗೆ ಜಂಗಮಸಂಬಂಧವಾಯಿತ್ತಯ್ಯ, ಬಸವಣ್ಣ ನಿನ್ನ ಸದ್ಭಕ್ತಿಯ ತಿಳಿದು ಎನಗೆ ನಿಜಸಾಧ್ಯವಾಯಿತ್ತಯ್ಯ, ಬಸವಣ್ಣ ಚೆನ್ನಮಲ್ಲಿಕಾರ್ಜುನನ ಹೆಸರಿಟ್ಟ ಗುರು ನೀನಾದ ಕಾರಣ ನಾನೆಂಬುದಿಲ್ಲವಯ್ಯ ಬಸವಣ್ಣ ೩೩೩. ಅಯ್ಯ, ನಿಮ್ಮಾನುಭಾವಿಗಳ ಸಂಗದಿಂದ ಎನ್ನ ತನು ಶುದ್ಧವಾಯಿತ್ತು! ಅಯ್ಯ, ನಿಮ್ಮ ಅನುಭಾವಿಗಳು ಎನ್ನನೊರೆದೊರೆದು, ಕಡಿಕಡಿದು, ಅರೆದರೆದು ಅನುಮಾಡಿದ ಕಾರಣ ಎನ್ನ ಮನ ಶುದ್ಧವಾಯಿತ್...

ಅಕ್ಕನ ವಚನಗಳು - 321 ರಿಂದ 330 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೨೧. ಕಳವಳದ ಮನವು ತಲೆಕೆಳಗಾದುದವ್ವ ಸುಳಿದು ಬೀಸುವ ಗಾಳಿ ಉರಿಯಾಯಿತವ್ವ ಬೆಳದಿಂಗಳು ಬಿಸಿಲಾಯಿತ್ತು ಕೆಳದಿ ಹೊಳಲ ಸುಂಕಿಗನಂತೆ ತೊಳಲುತಿದ್ದೆನವ್ವ ತಿಳುಹೌ ಬುದ್ಧಿಯ ಹೇಳಿ ಕರೆತಾರೆಲೆಗವ್ವ ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವ ೩೨೨. ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವ ನಿಮನಿಮಗೆಲ್ಲ ಶೃಂಗಾರವ ಮಾಡಿಕೊಳ್ಳಿ ಚೆನ್ನಮಲ್ಲಿಕಾರ್ಜುನನೀಗಳೇ ಬಂದಹನು ಇದಿರುಗೊಳ್ಳ ಬನ್ನಿರೇ ಅವ್ವಗಳಿರಾ! ೩೨೩. ಬಂದಹನೆಂದು ಬಟ್ಟೆಯ ನೋಡಿ ಬಾರದಿದ್ದರೆ ಕರಗಿ ಕೊರಗಿದೆನವ್ವ ತಡವಾದರೆ ಬಡವಾದೆ ತಾಯೆ ಚೆನ್ನಮಲ್ಲಿಕಾರ್ಜುನ ಒಂದಿರುಳಗಲಿದರೆ ತೆಕ್ಕೆ ಸಡಿಲಿದ ಜಕ್ಕವಕ್ಕಿಯಂತಾದೆನವ್ವ ೩೨೪. ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ! ಒಚ್ಚತ ಅಗಲಿರೆ, ಕಾಣದೆ ಇರಲಾರೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಅಗಲಿ ಅಗಲದ ಸುಖವೆಂದಪ್ಪುದೋ! ೩೨೫. ಉರಿಯ [ಪಳಿಯನೆ] ಉಡಿಸಿ, ಊರಿಂದ ಹೊರಗಿರಿಸಿ ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವ ತುರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಕರೆ ನೊಂದೆ ನೋಡವ್ವ ಅವಸ್ಥೆಯಿಂದ ಹಿರಿದು ದುಃಖದಲ್ಲಿ ಬೆಂದೆ ಕರ...

ಅಕ್ಕನ ವಚನಗಳು - 311 ರಿಂದ 320 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೧೧. ನಾಳೆ ಬರುವುದು ನಮಗಿಂದೇ ಬರಲಿ ಇಂದು ಬರುವುದು ನಮಗೀಗಲೇ ಬರಲಿ ಆಗೀಗ ಎನ್ನದಿರು ಚೆನ್ನಮಲ್ಲಿಕಾರ್ಜುನ ೩೧೨. ಕಿಡಿಕಿಡಿ ಕಾರಿದರೆನಗೆ ಹಸಿವು ತೃಷೆ ಅಡಗಿತ್ತೆಂಬೆ ಸಮುದ್ರ ಮೇರೆದಪ್ಪಿದರೆ ಎನಗೆ ಮಜ್ಜನವ ನೀಡಿದರೆಂಬೆ ಮುಗಿಲು ಹರಿದುಬಿದ್ದರೆ ಎನಗೆ ಪುಷ್ಪದ ಅರಳೆಂಬೆ ಶಿರ ಹೋದರೆ ಚೆನ್ನಮಲ್ಲಿಕಾರ್ಜುನದೇವಂಗೆ ಅರ್ಪಿತವೆಂಬೆ ೩೧೩. ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವೆನೆಯ್ಯ ! ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನೆಯ್ಯ ! ಕಂದ, ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯ ಚೆನ್ನಮಲ್ಲಿಕಾರ್ಜುನ ೩೧೪. ಉದಯದಲೆದ್ದು ನಿಮ್ಮ ನೆನೆವೆನಯ್ಯ ನಿಮ್ಮ ಬರವ ಹಾರುತಿರ್ಪೆನಯ್ಯ ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನ, ನೀನಾವಾಗ ಬಂದಹೆಯೆಂದು ೩೧೫. ಗಿರಿಯಲಲ್ಲದೆ ಹುಲುಮೊರಡಿಯಲಾಡುವುದೇ ನವಿಲು? [ಕೊಳನನಲ್ಲದೆ] ಕಿರುವಳ್ಳಕೆಳಸುವುದೇ ಹಂಸ? ಮಾಮರ ತಳಿತಲ್ಲದೇ ಸ್ವರಗೈಯುವುದೇ ಕೋಗಿಲೆ? ಪರಿಮಳವಿಲ್ಲದ ಪುಷ್ಪಕೆಳಸುವುದೇ ಭ್ರಮರ? ಎನ್ನ ಜೀವ ಚೆನ್ನಮಲ್ಲಿಕಾರ್...

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...

ಅಕ್ಕನ ವಚನಗಳು - 291 ರಿಂದ 300 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೯೧. ಹುಟ್ಟು-ಹೊರೆಯ ಕಟ್ಟಳೆಯ ಕಳೆದನವ್ವ ಹೊನ್ನು-ಮಣ್ಣಿನ ಮಾಯೆಯ ಮಾಣಿಸಿದನವ್ವ ಎನ್ನ ತನುವಿನ ಲಜ್ಜೆಯನಿಳುಹಿ ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನ ಒಳಗಾದವಳನೇನೆಂದು ನುಡಿಯಿಸುವಿರವ್ವ ೨೯೨. ಕಾಯದ ಕಳವಳವ ಕೆಡಿಸಿ ಮನದ ಮಾಯೆಯ ಮಾಣಿಸಿ ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯ ಶಿವಶಿವಾ ಎನ್ನ ಬಂಧನವ ಬಿಡಿಸಿ ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯ ಇರುಳೋಸರಿಸದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳಗೋಲಾಡುವೆನಯ್ಯ ಚೆನ್ನಮಲ್ಲಿಕಾರ್ಜುನ ೨೯೩. ಅಯ್ಯ, ನೀನೆನ್ನ ಮೊರೆಯನಾಲಿಸಿದೊಡಾಲಿಸು ಆಲಿಸದಿರ್ದೊಡೆ ಮಾಣು ಅಯ್ಯ, ನೀನೆನ್ನ ದುಃಖವ ನೋಡಿದೊಡೆ ನೋಡು ನೋಡದಿರ್ದೊಡೆ ಮಾಣು ಎನಗಿದು ವಿಧಿಯೆ?! ನೀನೊಲ್ಲದೊಡೆ ನಾನೊಲಿಸುವ ಪರಿಯೆಂತಯ್ಯ? ಮಾನವಳಿಸಿ ಮಾರುವೋಗಿ ಮರೆವೊಕ್ಕೊಡೆ ಕೊಂಬ ಪರಿಯೆಂತಯ್ಯ ಚೆನ್ನಮಲ್ಲಿಕಾರ್ಜುನ ೨೯೪. ಮುಡಿ ಬಿಟ್ಟು ಮೊಗ ಬಾಡಿ ತನು ಕರಗಿದವಳ ಎನ್ನನೇಕೆ ನುಡಿಸುವಿರಿ ಎಲೆ ಅಣ್ಣಗಳಿರಾ? ಎನ್ನನೇಕೆ ಕಾಡುವಿರಿ ಎಲೆ ತಂದೆಗಳಿರಾ? ಬಲುಹಳಿದು, ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ...

ಅಕ್ಕನ ವಚನಗಳು - 281 ರಿಂದ 290 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೮೧. ಕಲ್ಲಹೊತ್ತು ಕಡಲೊಳಗೆ ಮುಳುಗಿದೊಡೆ ಎಡರಿಂಗೆ ಕಡೆಯುಂಟೇ ಅವ್ವ? ಉಂಡು ಹಸಿವಾಯಿತ್ತೆಂದೊಡೆ ಭಂಗವೆಂಬೆ ಕಂಡ ಕಂಡ ಠಾವಿನಲ್ಲಿ ಮನ ಬೆಂದೊಡೆ ಗಂಡ ಮಲ್ಲಿಕಾರ್ಜುನಯ್ಯನೆಂತೊಲಿವೆನಯ್ಯ ೨೮೨. ಉಡುವೆ ನಾನು ಲಿಂಗಕ್ಕೆಂದು ತೊಡುವೆ ನಾನು ಲಿಂಗಕ್ಕೆಂದು ಮಾಡುವೆ ನಾನು ಲಿಂಗಕ್ಕೆಂದು ನೋಡುವೆ ನಾನು ಲಿಂಗಕ್ಕೆಂದು ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ ಮಾಡಿಯೂ ಮಾಡದಂತಿಪ್ಪೆ ನೋಡಾ! ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಳಗೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವ? ೨೮೩. ಸಾವಿಲ್ಲದ ಕೇಡಿಲ್ಲದ ಚೆಲುವಂಗಾನೊಲಿದೆನವ್ವ ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗಾನೊಲಿದೆನವ್ವ ಭವವಿಲ್ಲದ ಭಯವಿಲ್ಲದ ಚೆಲುವಂಗಾನೊಲಿದೆ ಕುಲಸೀಮೆಯಿಲ್ಲದ ನಿಸ್ಸೀಮ ಚೆಲುವಂಗಾನೊಲಿದೆ ಇದುಕಾರಣ ಚೆನ್ನಮಲ್ಲಿಕಾರ್ಜುನ ಚೆಲುವ ಗಂಡನೆನಗೆ ಈ ಸಾವ ಕೆಡುವ ಗಂಡರನೊಯ್ದು [ಒಲೆಯೊಳಗಿಕ್ಕು ತಾಯೆ] ೨೮೪. ಅಯ್ಯ, ಪರಾತ್ಪರ ಸತ್ಯಸದಾಚಾರ ಗುರುಲಿಂಗ- ಜಂಗಮದ ಶ್ರೀಚರಣವನ್ನು ಹಿಂದೆ ಹೇಳದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...